ನವದೆಹಲಿ: ಬಿಜೆಪಿಯನ್ನು ಎದುರಿಸಲು ಪ್ರಮುಖ ಆಧಾರ ಸ್ಥಂಭವಾಗಿರುವ ಕಾಂಗ್ರೆಸ್ ಇಲ್ಲದೆ ರಾಷ್ಟ್ರಮಟ್ಟದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಸಾಧ್ಯವಿಲ್ಲ ಎಂದು ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭಾನುವಾರ ಹೇಳಿದ್ದಾರೆ.
'ಯುಪಿಎ ಮೈತ್ರಿಕೂಟ ಇಲ್ಲ’ ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಘೇಲ್ ಅವರು, ಆಡಳಿತಾರೂಢ ಪಕ್ಷದ ವಿರುದ್ಧ ಹೋರಾಡುವಲ್ಲಿ ಟಿಎಂಸಿಯನ್ನು ಪ್ರಮುಖ ವಿರೋಧ ಪಕ್ಷವಾಗಿಸಲು ಬಯಸುತ್ತೀರಾ? ಅಥವಾ ಇತರ ವಿರೋಧ ಪಕ್ಷಗಳನ್ನೂ ಜೊತೆಗೆ ಸೇರಿಸಿಕೊಳ್ಳುತ್ತೀರಾ? ಎಂಬುದನ್ನು ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಬೇಕು ಎಂದಿದ್ದಾರೆ.
2024ರ ಸಾರ್ವತ್ರಿಕ ಚುನಾವಣೆಯಲ್ಲಿ ವಿರೋಧಪಕ್ಷದ ನಾಯಕತ್ವವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬುದನ್ನು ಸೋನಿಯಾ ಗಾಂಧಿ ನೇತೃತ್ವದ ಯುಪಿಎ ಮೈತ್ರಿಕೂಟ ತಿರ್ಮಾನಿಸಲಿದೆ ಎಂದೂ ತಿಳಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.