
ಅರವಿಂದ ಕೇಜ್ರಿವಾಲ್
(ಪಿಟಿಐ ಚಿತ್ರ)
ನವದೆಹಲಿ: ಬಿಜೆಪಿ ಕೇಂದ್ರ ಕಚೇರಿಗೆ ಆಮ್ ಆದ್ಮಿ ಪಕ್ಷ (ಎಎಪಿ) ಇಂದು ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆಗೆ ಅನುಮತಿಯನ್ನು ನೀಡಿಲ್ಲ ಎಂದು ದೆಹಲಿ ಪೊಲೀಸ್ ತಿಳಿಸಿದೆ.
ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ. ಅಲ್ಲದೆ ಮೆರವಣಿಗೆಗಾಗಿ ಅನುಮತಿಯನ್ನೂ ಪಡೆದಿಲ್ಲ ಎಂದು ದೆಹಲಿ ಪೊಲೀಸ್ ತಿಳಿಸಿದೆ.
ಏತನ್ಮಧ್ಯೆ ಬಿಜೆಪಿ ಕಚೇರಿ ಹಾಗೂ ಸುತ್ತುಮುತ್ತಲಿನ ಪ್ರದೇಶದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ದೀನ್ ದಯಾಳ್ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿಲುಗಡೆಗೊಳಿಸಲಾಗಿದೆ ಎಂದು ತಿಳಿಸಿದೆ.
ಶನಿವಾರ ಸುದ್ದಿಗೋಷ್ಠಿ ನಡೆಸಿದ್ದ ಕೇಜ್ರಿವಾಲ್, 'ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್, ಸಂಜಯ್ ಸಿಂಗ್ ಅವರನ್ನು ಜೈಲಿಗೆ ಕಳುಹಿಸುವ ಆಟವಾಡುತ್ತಿದ್ದೀರಿ ಎಂದ ಅವರು, ನಾನು ಮತ್ತು ಎಎಪಿಯ ಇತರ ನಾಯಕರು ಇದೇ 19ರಂದು ಬಿಜೆಪಿಯ ಪ್ರಧಾನ ಕಚೇರಿಗೆ ನಡಿಗೆ ಮೂಲಕ ಸಾಗುತ್ತೇವೆ. ಆಗ ಪ್ರಧಾನಿ ಅವರು ನಮ್ಮಲ್ಲಿ ಯಾರನ್ನಾದರೂ ಜೈಲಿಗೆ ಕಳುಹಿಸುವ ಧೈರ್ಯ ತೋರಲಿ' ಎಂದು ಸವಾಲು ಹಾಕಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.