ಜಿ. ಕಿಶನ್ ರೆಡ್ಡಿ
ನವದೆಹಲಿ: ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ರಾಜ್ಯಗಳಿಗೆ ನಿರ್ದಿಷ್ಟವಾದ ಸಾಂಸ್ಕೃತಿಕ ಪಠ್ಯಕ್ರಮ ಜಾರಿಗೆ ತರುವ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ಸೋಮವಾರ ಸಂಸತ್ತಿಗೆ ತಿಳಿಸಿದರು.
ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ರೆಡ್ಡಿ ಅವರು, ರಾಜ್ಯಗಳು ತಮ್ಮದೇ ಆದ ಪಠ್ಯಕ್ರಮ ಮತ್ತು ಪಠ್ಯಪುಸ್ತಕಗಳನ್ನು ಸಿದ್ಧಪಡಿಸುತ್ತವೆ. ತನ್ನ ಅಗತ್ಯಕ್ಕೆ ತಕ್ಕಂತೆ ನಿರ್ದಿಷ್ಟವಾದ ವಿಷಯಗಳನ್ನು ಸೇರಿಸಿಕೊಳ್ಳುತ್ತವೆ ಎಂಬುದನ್ನು ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ (ಎನ್‌ಇಪಿ) ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.