ADVERTISEMENT

ರದ್ದುಗೊಂಡ ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೆ ತರುವ ಯೋಚನೆಯಿಲ್ಲ: ಕೇಂದ್ರ

ಪಿಟಿಐ
Published 11 ಫೆಬ್ರುವರಿ 2022, 15:16 IST
Last Updated 11 ಫೆಬ್ರುವರಿ 2022, 15:16 IST
ಸಾಂದರ್ಭಿಕ ಚಿತ್ರ (ಪಿಟಿಐ)
ಸಾಂದರ್ಭಿಕ ಚಿತ್ರ (ಪಿಟಿಐ)   

ನವದೆಹಲಿ: ಹಿಂತೆಗೆದುಕೊಂಡಿರುವ ಮೂರು ಕೃಷಿ ಕಾಯ್ದೆಗಳನ್ನು ಪುನಃ ಅನುಷ್ಠಾನಕ್ಕೆ ತರುವ ಯೋಚನೆ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ಕೃಷಿ ಸಚಿವ ನರೇಂದ್ರ ಸಿಂಗ್‌ ಥೋಮರ್‌ ಅವರು ಶುಕ್ರವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

ಭವಿಷ್ಯದಲ್ಲಿ ಪುನಃ ಮೂರು ಕೃಷಿ ಕಾಯ್ದೆಗಳನ್ನು ಚಾಲ್ತಿಗೆ ತರುವ ಯೋಚನೆ ಕೇಂದ್ರ ಸರ್ಕಾರದ ಮುಂದೆ ಇದೆಯೇ ಎಂಬ ಲಿಖಿತ ಪ್ರಶ್ನೆಗೆ, 'ಇಲ್ಲ ಸರ್‌' ಎಂದು ಸಚಿವರು ಉತ್ತರಿಸಿದ್ದಾರೆ.

ರೈತರ ಚಳುವಳಿ ವೇಳೆ ಮೃತಪಟ್ಟ ರೈತರ ಕುಟುಂಬಕ್ಕೆ ಮತ್ತು ಹಾನಿಗೊಳಗಾದ ರೈತರಿಗೆ ಪರಿಹಾರ ವಿತರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ರಾಜ್ಯ ಸರ್ಕಾರ ನಿಗಾ ವಹಿಸಲಿದೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷ ನವೆಂಬರ್‌ 19ರಂದು ಮೂರು ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಂಡಿರುವುದಾಗಿ ಘೋಷಿಸಿದ್ದರು.

ಹಿಂತೆಗೆಯಲ್ಪಟ್ಟ ಕೃಷಿ ಕಾಯ್ದೆಗಳು
1. ರೈತರ ಉತ್ಪನ್ನಗಳ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ನೆರವು) ಕಾಯ್ದೆ – 2020
2. ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಖಾತರಿ ಮತ್ತು ಕೃಷಿ ಜಮೀನು ಸೇವೆಗಳ ಒಪ್ಪಂದ ಕಾಯ್ದೆ – 2020
3. ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ –1955

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.