ADVERTISEMENT

ಮುಂಬೈನಲ್ಲಿ ಕೋವಿಡ್ ಹೆಚ್ಚಳ: ಲೋಕಲ್ ರೈಲು ಸ್ಥಗಿತವಿಲ್ಲ: ಸಚಿವರ ಸ್ಪಷ್ಟನೆ

ಮೃತ್ಯುಂಜಯ ಬೋಸ್
Published 6 ಜನವರಿ 2022, 12:41 IST
Last Updated 6 ಜನವರಿ 2022, 12:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ನಡುವೆ ವಾಣಿಜ್ಯ ನಗರಿ ಮುಂಬೈನಲ್ಲಿ ಲೋಕಲ್ ರೈಲು ಸೇವೆಯನ್ನು ಸ್ಥಗಿತಗೊಳಿಸುವ ಯಾವುದೇ ಇರಾದೆಯಿಲ್ಲ ಎಂದು ಮಹಾರಾಷ್ಟ್ರದ ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಾಜೇಶ್ ತೋಪೆ ತಿಳಿಸಿದ್ದಾರೆ.

'ಮುಂಬೈನಲ್ಲಿ ಲೋಕಲ್ ರೈಲು ಓಡಾಟವನ್ನು ನಿಲುಗಡೆಗೊಳಿಸುವ ಯಾವುದೇ ಯೋಜನೆ ನಮ್ಮ ಮುಂದಿಲ್ಲ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಪರಿಸ್ಥಿತಿಯನ್ನು ದೈನಂದಿನ ಅವಲೋಕಿಸುತ್ತಿದ್ದಾರೆ' ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಸಂಪೂರ್ಣ ಲೌಕ್‌ಡೌನ್ ಹೇರಿಕೆಯ ಸಾಧ್ಯತೆಯನ್ನು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಕೂಡಾ ತಳ್ಳಿ ಹಾಕಿದ್ದಾರೆ. ಆದರೂ ನಿರ್ಬಂಧ ಬಿಗಿಗೊಳಿಸುವ ಸೂಚನೆ ನೀಡಿದ್ದಾರೆ.

ADVERTISEMENT

ಸಂಭವನೀಯ ಕೋವಿಡ್ ಮೂರನೇ ಅಲೆಯನ್ನು ಗಮನದಲ್ಲಿಟ್ಟುಕೊಂಡು ಆಸ್ಪತ್ರೆಯಲ್ಲಿ ಹಾಸಿಗೆ ಸಾಮರ್ಥ್ಯವನ್ನು ಹೆಚ್ಚಿಸುವಂತೆ ಮುಂಬೈ ಮುನ್ಸಿಪಲ್ ಕಮಿಷನರ್ ಇಕ್ಬಾಲ್ ಸಿಂಗ್ ಚಾಹಲ್ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.