ADVERTISEMENT

ನಿವೃತ್ತ ನ್ಯಾಯಮೂರ್ತಿಗಳ ನೇಮಕಕ್ಕೆ ಪ್ರಸ್ತಾವ ಬಂದಿಲ್ಲ: ಕೇಂದ್ರ

ಪಿಟಿಐ
Published 3 ಏಪ್ರಿಲ್ 2025, 15:10 IST
Last Updated 3 ಏಪ್ರಿಲ್ 2025, 15:10 IST
ಅರ್ಜುನ್‌ ರಾಮ್‌ ಮೇಘವಾಲ್‌
ಅರ್ಜುನ್‌ ರಾಮ್‌ ಮೇಘವಾಲ್‌   

ನವದೆಹಲಿ: ನಿವೃತ್ತ ನ್ಯಾಯಮೂರ್ತಿಗಳನ್ನು ತಾತ್ಕಾಲಿಕವಾಗಿ ಹೈಕೋರ್ಟ್‌ಗಳಿಗೆ ಮರು ನೇಮಕ ಮಾಡಿಕೊಳ್ಳುವ ಬಗ್ಗೆ ಈವರೆಗೆ ಯಾವುದೇ ಪ್ರಸ್ತಾವವನ್ನು ಸ್ವೀಕರಿಸಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.

ಹೈಕೋರ್ಟ್‌ಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ನಿವೃತ್ತ ನ್ಯಾಯಮೂರ್ತಿಗಳನ್ನು ಮರು ನೇಮ‌ಕ ಮಾಡಿಕೊಳ್ಳಲು ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನು ಹೊರಡಿಸಿ ಎರಡು ತಿಂಗಳಾದರೂ ಹೈಕೋರ್ಟ್‌ಗಳಿಂದ ಈ ಬಗ್ಗೆ ಪ್ರಸ್ತಾವ ಸಲ್ಲಿಕೆಯಾಗಿಲ್ಲ.

ಈ ಕುರಿತು ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಮಾಹಿತಿ ನೀಡಿದ್ದು, ಸಂವಿಧಾನದ 224ಎ ವಿಧಿಯು ನಿವೃತ್ತ ನ್ಯಾಯಮೂರ್ತಿಗಳ ಮರು ನೇಮಕಕ್ಕೆ ಅವಕಾಶ ನೀಡುತ್ತದೆ. ಈ ಕುರಿತಂತೆ 2025ರ ಜ.30ರಂದು ಸುಪ್ರೀಂಕೋರ್ಟ್‌ ಮಾರ್ಗಸೂಚಿಯನ್ನೂ ಹೊರಡಿಸಿದೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.