ADVERTISEMENT

ಬಂಜೆತನಕ್ಕೆ ಲಸಿಕೆ ಕಾರಣ ಎನ್ನುವುದಕ್ಕೆ ಸಾಕ್ಷ್ಯಾಧಾರಗಳಿಲ್ಲ: ಆರೋಗ್ಯ ಸಚಿವಾಲಯ

ಪಿಟಿಐ
Published 30 ಜೂನ್ 2021, 14:26 IST
Last Updated 30 ಜೂನ್ 2021, 14:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಲಸಿಕೆ ಪಡೆಯುವುದರಿಂದ ಸಂತಾನೋತ್ಪತಿ ಮೇಲೆ ಪರಿಣಾಮ ಬೀರಲಿದೆ ಎಂಬುದಕ್ಕೆ ಯಾವುದೇ ರೀತಿಯ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.

ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿಯಾಗಿವೆ ಎಂದು ತಿಳಿಸಿದೆ.

ಕೋವಿಡ್‌–19 ಲಸಿಕೆಗೆ ಸಂಬಂಧಿಸಿದ ರಾಷ್ಟ್ರೀಯ ತಜ್ಞರ ತಂಡ (ಎನ್‌ಇಜಿವಿಎಸಿ) ಎದೆಹಾಲುಣಿಸುವ ಮಹಿಳೆಯರು ಸಹ ಲಸಿಕೆ ಹಾಕಿಸಿಕೊಳ್ಳುವಂತೆ ಶಿಫಾರಸು ಮಾಡಿದೆ. ಲಸಿಕೆ ಹಾಕಿಸಿಕೊಳ್ಳುವ ಮುನ್ನ ಅಥವಾ ನಂತರ ಎದೆಹಾಲುಣಿಸುವುದನ್ನು ನಿಲ್ಲಿಸಬಾರದು ಎಂದು ತಿಳಿಸಿದೆ. ಹೀಗಾಗಿ, ಲಸಿಕೆ ಸಂಪೂರ್ಣ ಸುರಕ್ಷಿತ. ಈ ಬಗ್ಗೆ ಯಾವುದೇ ರೀತಿಯ ಅನುಮಾನ ಬೇಡ ಎಂದು ತಿಳಿಸಿದೆ.

ADVERTISEMENT

ಲಸಿಕೆ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳ ಹಿನ್ನೆಲೆಯಲ್ಲಿ ಆರೋಗ್ಯ ಸಚಿವಾಲಯ ಈ ಸ್ಪಷ್ಟನೆ ನೀಡಿದೆ.

ಸಚಿವಾಲಯದ ವೆಬ್‌ಸೈಟ್‌ನಲ್ಲಿರುವ ಪ್ರಶ್ನೋತ್ತರದಲ್ಲೂ ಲಸಿಕೆ ಬಗ್ಗೆ ವಿವರಿಸಲಾಗಿದೆ. ಎಲ್ಲ ಲಸಿಕೆಗಳನ್ನು ಮೊದಲು ಪ್ರಾಣಿಗಳ ಮೇಲೆ ಪರೀಕ್ಷೆ ಮಾಡಲಾಗಿದೆ. ಬಳಿಕ ಮನುಷ್ಯರ ಮೇಲೆ ಪರೀಕ್ಷೆ ನಡೆಸಲಾಗಿದೆ. ಲಸಿಕೆಯಿಂದ ಯಾವುದಾದರೂ ಅಡ್ಡಪರಿಣಾಮಗಳು ಬೀರುತ್ತವೆಯೇ ಎನ್ನುವುದನ್ನು ಸಹ ಪರೀಕ್ಷೆ ಮಾಡಲಾಗಿದೆ. ಲಸಿಕೆ ಸುರಕ್ಷಿತವಾಗಿದೆ ಎನ್ನುವುದನ್ನು ಸಾಬೀತುಪಡಿಸಿದ ಬಳಿಕವೇ ಬಳಸಲು ಅಧಿಕೃತ ಒಪ್ಪಿಗೆ ನೀಡಲಾಗಿದೆ. ಹೀಗಾಗಿ, ಲಸಿಕೆ ಹಾಕಿಸಿಕೊಳ್ಳುವುದರಿಂದ ಬಂಜೆತನಕ್ಕೆ ಕಾರಣವಾಗುತ್ತದೆ ಎನ್ನುವುದಕ್ಕೆ ವೈಜ್ಞಾನಿಕ ಆಧಾರಗಳಿಲ್ಲ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.