ADVERTISEMENT

ಎನ್‌ಸಿಇಆರ್‌ಟಿ ಪಠ್ಯಪುಸ್ತಕ ಕೊರತೆ ಇಲ್ಲ: ರಾಜ್ಯ ಸಚಿವೆ ಅನ್ನಪೂರ್ಣಾ ದೇವಿ

ಪಿಟಿಐ
Published 18 ಜುಲೈ 2022, 12:27 IST
Last Updated 18 ಜುಲೈ 2022, 12:27 IST
–ಪ್ರಾತಿನಿಧಿಕ ಚಿತ್ರ
–ಪ್ರಾತಿನಿಧಿಕ ಚಿತ್ರ   

ನವದೆಹಲಿ: ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳ ಕೊರತೆ ಇಲ್ಲ. 2022–23ನೇ ಶೈಕ್ಷಣಿಕ ವರ್ಷದಲ್ಲಿ ದೇಶದಾದ್ಯಂತ 4 ಕೋಟಿ ಪಠ್ಯಪುಸ್ತಕಗಳನ್ನು ವಿತರಿಸಲಾಗಿದೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವೆ ಅನ್ನಪೂರ್ಣಾ ದೇವಿ ಸೋಮವಾರ ಲೋಕಸಭೆಯಲ್ಲಿ ಮಾಹಿತಿ ನೀಡಿದರು.

‘ಎನ್‌ಸಿಇಆರ್‌ಟಿ ಪ್ರಧಾನ ಕಚೇರಿಯಲ್ಲಿರುವ ಮಾರಾಟ ಕೇಂದ್ರ, ಅಜ್ಮೀರ್‌, ಭೋಪಾಲ್‌, ಭುವನೇಶ್ವರ, ಮೈಸೂರು ಮತ್ತು ಶಿಲ್ಲಾಂಗ್‌ನಲ್ಲಿರುವ ಪ್ರಾದೇಶಿಕ ಶಿಕ್ಷಣ ಸಂಸ್ಥೆಗಳಲ್ಲಿ (ಆರ್‌ಐಇ) ಹಾಗೂ ಅಹಮದಾಬಾದ್‌, ಬೆಂಗಳೂರು, ಕೋಲ್ಕತ್ತ ಮತ್ತು ಗುವಾಹಟಿಯಲ್ಲಿರುವ ಪ್ರಾದೇಶಿಕ ಕೇಂದ್ರಗಳ ಮೂಲಕ ಪಠ್ಯಪುಸ್ತಕಗಳನ್ನು ವಿತರಿಸಲಾಗಿದೆ. ಎನ್‌ಸಿಇಆರ್‌ಟಿ ವೆಬ್‌ ಪೋರ್ಟಲ್‌ ಮೂಲಕವೂ ಪಠ್ಯಪುಸ್ತಕಗಳನ್ನು ಆರ್ಡರ್ ಮಾಡಬಹುದು’ ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT