ADVERTISEMENT

ನನಗೆ ಮತ ಹಾಕದವರಿಗೆ ಸಹಾಯ ಮಾಡುವುದಿಲ್ಲ: ಉತ್ತರ ಪ್ರದೇಶದ ಬಿಜೆಪಿ ಶಾಸಕ

ಸಂಜಯ ಪಾಂಡೆ
Published 21 ಮಾರ್ಚ್ 2022, 13:15 IST
Last Updated 21 ಮಾರ್ಚ್ 2022, 13:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತನಗೆ ಮತ ಹಾಕದವರು ಯಾವುದೇ ರೀತಿಯ ಸಹಾಯಕ್ಕಾಗಿ ನನ್ನನ್ನು ಸಂಪರ್ಕಿಸಬಾರದು ಎಂದು ಚುನಾವಣೆಯಲ್ಲಿ ಜಯಿಸಿರುವ ಬಿಜೆಪಿ ಶಾಸಕರೊಬ್ಬರು ಹೇಳಿದ್ದಾರೆ.

ಹೋಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಬಾರಾಬಂಕಿ ಜಿಲ್ಲೆಯ ಹೈದರ್‌ಗಡ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ದಿನೇಶ್ ರಾವತ್, ವಿವಾದತ್ಮಾಕ ಹೇಳಿಕೆ ನೀಡಿದ್ದಾರೆ.

'ನನ್ನ ಎದುರಾಳಿಗಳಿಗೆ ಗೌರವ ಕೊಡುವ ಅಭ್ಯಾಸ ನನಗಿಲ್ಲ. ನೀವು ನನಗೆ ಮತ ಹಾಕದಿದ್ದರೆ ಸಹಾಯಕ್ಕಾಗಿ ನನ್ನ ಬಳಿಗೆ ಬರಬೇಡಿ, ನನಗೆ ಮತ ಹಾಕಿದವರಿಗೆ ಮಾತ್ರ ನಾನು ಸಹಾಯ ಮಾಡುತ್ತೇನೆ' ಎಂದು ಹೇಳಿದ್ದಾರೆ.

ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಾಗೊಂದು ವೇಳೆ ನೀವು ಮನಸ್ಸು ಬದಲಾಯಿಸಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದರೆ ಸಹಾಯಕ್ಕಾಗಿ ನನ್ನ ಬಳಿಗೆ ಬರಬಹುದು ಎಂಬ ಷರತ್ತನ್ನು ಇರಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ದಿನೇಶ್ ರಾವತ್, 25 ಸಾವಿರಕ್ಕೂ ಹೆಚ್ಚು ಮತಗಳಿಂದ ಜಯ ಗಳಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಲು ಬಿಜೆಪಿ ಮುಖಂಡರು ನಿರಾಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.