ADVERTISEMENT

ಪಾಕ್‌ನೊಂದಿಗೆ ಮಾತುಕತೆ ಇಲ್ಲದೇ ಉಗ್ರವಾದ ಅಂತ್ಯ ಅಸಾಧ್ಯ: ಅಬ್ದುಲ್ಲಾ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2021, 15:23 IST
Last Updated 11 ಡಿಸೆಂಬರ್ 2021, 15:23 IST
ಫಾರೂಕ್‌ ಅಬ್ದುಲ್ಲಾ
ಫಾರೂಕ್‌ ಅಬ್ದುಲ್ಲಾ   

ಜಮ್ಮು: 'ಪಾಕ್‌ನೊಂದಿಗೆ ಮಾತುಕತೆ ಇಲ್ಲದೇ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಅಂತ್ಯಗೊಳಿಸಲು ಸಾಧ್ಯವಿಲ್ಲ. ಇಲ್ಲಿ ಉಗ್ರವಾದವನ್ನು ಕೊನೆಗಾಣಿಸಲು ಬೇರೆ ದಾರಿಗಳಿಲ್ಲ' ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಫಾರೂಕ್‌ ಅಬ್ದುಲ್ಲಾ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರಿಗೆ ಸುರಕ್ಷತೆ ಇಲ್ಲ. ಇಂತಹ ಸಂದರ್ಭದಲ್ಲಿ ಜನ ಸಾಮಾನ್ಯರು ಹೇಗೆ ಸುರಕ್ಷಿತವಾಗಿರಲು ಸಾಧ್ಯವೇ' ಎಂದು ಪ್ರಶ್ನಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂಬ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಕಟ್ಟರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅಬ್ದುಲ್ಲಾ, 'ದೇಶದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ದೇಶದಲ್ಲಿ ಧಾರ್ಮಿಕ ಸಹಿಷ್ಣುತೆ ಇರುವುದರಿಂದ ಮುಸ್ಲಿಮರ ಸಾರ್ವಜನಿಕ ಪ್ರಾರ್ಥನೆಗಳಿಗೆ ಅವಕಾಶ ನೀಡಲೇಬೇಕು' ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.