ನೋಯ್ಡಾ: ವರದಕ್ಷಿಣೆ ತರುವಂತೆ ಕಿರುಕುಳ ನೀಡಿದ ಪತಿ, ತಾಯಿ ಜೊತೆ ಸೇರಿಕೊಂಡು ಪತ್ನಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಬಾವ ಹಾಗೂ ಸೋದರ ಮಾವನನ್ನು ಸೋಮವಾರ ಬಂಧಿಸಲಾಗಿದೆ.
ಆರೋಪಿಗಳಾದ ಸತ್ವೀರ್ ಭಾತಿ (55) ಹಾಗೂ ರೋಹಿತ್ ಭಾತಿ (28) ಕಸನಾ ಪೊಲೀಸ್ ಠಾಣೆ ಸಮೀಪ ಟೋಲ್ ಮೂಲಕ ಸಾಗುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇಬ್ಬರನ್ನು ಪ್ರತ್ಯೇಕವಾಗಿ ಬಂಧಿಸಿ, ವಶಕ್ಕೆ ಪಡೆಯಲಾಗಿದೆ. ವರದಕ್ಷಿಣೆ ಕಿರುಕುಳದಿಂದ ಮೃತಪಟ್ಟ ನಿಕ್ಕಿ ಗಂಡ ವಿಪಿನ್, ಬಾವ ರೋಹಿತ್ ಹಾಗೂ ಅತ್ತೆ ಹಾಗೂ ಮಾವನನ್ನು ಕೂಡ ಆರೋಪಿಗಳು ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ಎಲ್ಲಾ 4 ಮಂದಿಯನ್ನು ಬಂಧಿಸಿದಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.