ನೊಯ್ಡಾ: ನಗರದ ಸೆಕ್ಟರ್ 126ರ ಸಮೀಪದಲ್ಲಿ ನಡೆಯುತ್ತಿರುವ M3M ಯೋಜನೆ ಕಾಮಗಾರಿ ಸ್ಥಳದ ಹತ್ತಿರ ಪಾದಚಾರಿ ಮಾರ್ಗದಲ್ಲಿ ಕುಳಿತಿದ್ದ ಇಬ್ಬರು ಕಾರ್ಮಿಕರಿಗೆ ಲ್ಯಾಂಬೊರ್ಗಿನಿ ಕಾರು ಡಿಕ್ಕಿಯಾಗಿದೆ.
ಕಾರು ವೇಗವಾಗಿ ಬಂದು ಡಿಕ್ಕಿಯಾದ ಕಾರಣ, ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನ ಚಾಲಕನನ್ನು ದೀಪಕ್ ಎಂದು ಗುರುತಿಸಲಾಗಿದ್ದು, ಆತನನ್ನು ಹಾಗೂ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ತನಿಖೆ ಪ್ರಗತಿಯಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.