ADVERTISEMENT

Padma Awards-2026 | ನಾಮ ನಿರ್ದೇಶನ ಪ್ರಕ್ರಿಯೆ ಆರಂಭ: ಗೃಹ ಸಚಿವಾಲಯ

ಪಿಟಿಐ
Published 11 ಏಪ್ರಿಲ್ 2025, 9:43 IST
Last Updated 11 ಏಪ್ರಿಲ್ 2025, 9:43 IST
   

ನವದೆಹಲಿ: 2026ರ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮತ್ತು ಶಿಫಾರಸು ಪ್ರಕ್ರಿಯೆಯನ್ನು ಗೃಹ ಸಚಿವಾಲಯ (ಎಂಎಚ್‌ಎ) ಪ್ರಾರಂಭಿಸಿದೆ.

ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು ಮತ್ತು ಶಿಫಾರಸುಗಳನ್ನು ಸಲ್ಲಿಸಲು 2025ರ ಜುಲೈ 31 ಕೊನೆಯ ದಿನ. ಸಾರ್ವಜನಿಕರ ನಾಮನಿರ್ದೇಶನ ಮತ್ತು ಶಿಫಾರಸುಗಳನ್ನು 'ರಾಷ್ಟ್ರೀಯ ಪುರಸ್ಕಾರ ಪೋರ್ಟಲ್‌' (https://awards.gov.in). ಮೂಲಕ ಸ್ವೀಕರಿಸಲಾಗುತ್ತದೆ ಎಂದು ಅಧಿಕೃತ ಪ್ರಕಟಣೆ ಶುಕ್ರವಾರ ತಿಳಿಸಿದೆ.

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮ ಶ್ರೀಗೆ ಆಯ್ಕೆಯಾದವರ ಹೆಸರುಗಳನ್ನು ಗಣರಾಜ್ಯೋತ್ಸವದ ಮುನ್ನಾ ದಿನದಂದು ಘೋಷಿಸಲಾಗುತ್ತದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.