ಮಉ (ಉತ್ತರಪ್ರದೇಶ): ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಅವರ ಪತ್ನಿ ಅಫ್ಸಾ ಅನ್ಸಾರಿ ವಿರುದ್ಧ 2020ರ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ನ್ಯಾಯಾಲಯವೊಂದು ಜಾಮೀನುರಹಿತ ಬಂಧನ ವಾರಂಟ್ ಜಾರಿಗೊಳಿಸಿದೆ.
ದಕ್ಷಿಣ ತೋಲಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಹಲವು ಬಾರಿ ನ್ಯಾಯಾಲಯಕ್ಕೆ ಹಾಜರಾಗದೇ ಇರುವ ಕಾರಣ ವಾರಂಟ್ ಜಾರಿಯಾಗಿದೆ ಎಂದು ನ್ಯಾಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಅಫ್ಸಾ ಅನ್ಸಾರಿ ಅವರನ್ನು ಹುಡಕಿಕೊಟ್ಟವರಿಗೆ ಈಗಾಗಲೇ ಬಹುಮಾನ ಘೋಷಿಸಲಾಗಿದೆ. ಬಹುಮಾನದ ಮೊತ್ತವನ್ನು ಈಗ ₹50 ಸಾವಿರಕ್ಕೆ ಏರಿಸಲಾಗಿದೆ. ನ್ಯಾಯಾಲಯದ ಆದೇಶದಂತೆ ಅಫ್ಸಾ ಹೆಸರನ್ನು ತಲೆಮರೆಸಿಕೊಂಡಿರುವವರ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆ ಆರಂಭಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.