ADVERTISEMENT

ಮುನ್ನೆಚ್ಚರಿಕೆ ಡೋಸ್‌: ವಿದೇಶಕ್ಕೆ ತೆರಳುವವರಿಗೆ ಅವಧಿಗೆ ಮೊದಲೇ ಪಡೆಯಲು ಅವಕಾಶ

ಪಿಟಿಐ
Published 12 ಮೇ 2022, 15:21 IST
Last Updated 12 ಮೇ 2022, 15:21 IST
ಸಾಂದರ್ಭಿಕ ಚಿತ್ರ –ಎಎಫ್‌ಪಿ
ಸಾಂದರ್ಭಿಕ ಚಿತ್ರ –ಎಎಫ್‌ಪಿ   

ನವದೆಹಲಿ: ಮುನ್ನೆಚ್ಚರಿಕೆ ಡೋಸ್‌ ಪಡೆಯಲು ಇರುವ ನಿಯಮವನ್ನು ಕೇಂದ್ರ ಸರ್ಕಾರ ಗುರುವಾರ ಸಡಿಲಿಸಿದೆ. ಆ ಪ್ರಕಾರ ಎರಡನೇ ಡೋಸ್‌ ಲಸಿಕೆ ಪಡೆದು 9 ತಿಂಗಳು ಆಗದೇ ಇದ್ದರೂ ವಿದೇಶಕ್ಕೆ ತೆರಳುವವರು ಮುನ್ನೆಚ್ಚರಿಕೆ ಡೋಸ್‌ ಪಡೆಯಬಹುದಾಗಿದೆ.

'ಕೋವಿನ್ ಜಾಲತಾಣದಲ್ಲಿ ಶೀಘ್ರವೇ ಈ ನೂತನ ಸೇವೆ ಲಭ್ಯವಾಗಲಿದೆ' ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯ ಟ್ವೀಟ್‌ ಮಾಡಿದ್ದಾರೆ.

ಕಳೆದ ವಾರಲಸಿಕೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್‌ಟಿಎಜಿಐ),ವಿದೇಶಕ್ಕೆ ತೆರಳುವ ನಾಗರಿಕರು, ವಿದ್ಯಾರ್ಥಿಗಳಿಗೆ ಎರಡನೇ ಡೋಸ್‌ ಮತ್ತು ಮುನ್ನೆಚ್ಚರಿಕೆ ಡೋಸ್‌ ನಡುವೆ ಕಡ್ಡಾಯವಾಗಿ 9 ತಿಂಗಳ ಅಂತರ ಇರಬೇಕು ಎಂಬ ನಿಯಮದಿಂದ ವಿನಾಯಿತಿನೀಡಬೇಕು ಎಂದು ಶಿಫಾರಸು ಮಾಡಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.