ADVERTISEMENT

ಈಶಾನ್ಯ ರಾಜ್ಯಗಳಲ್ಲಿ ಮಳೆ, ಪ್ರವಾಹ |3,800ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ ಸೇನೆ

ಪಿಟಿಐ
Published 10 ಜುಲೈ 2025, 13:35 IST
Last Updated 10 ಜುಲೈ 2025, 13:35 IST
<div class="paragraphs"><p>ಅಸ್ಸಾಂನಲ್ಲಿ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿರುವ ದೃಶ್ಯ</p></div>

ಅಸ್ಸಾಂನಲ್ಲಿ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿರುವ ದೃಶ್ಯ

   

–ಪಿಟಿಐ ಚಿತ್ರ

ಗುವಾಹಟಿ: ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ಸಾವಿರಾರು ಕುಟುಂಬಗಳು ನಿರಾಶ್ರಿತವಾಗಿವೆ. ಇದರ ಬೆನ್ನಲ್ಲೇ ಭಾರತೀಯ ಸೇನೆಯು ಮಾನವೀಯ ನೆರವು ಹಾಗೂ ವಿಪತ್ತು ಪರಿಹಾರ (ಎಚ್‌ಎಡಿಆರ್‌) ಕಾರ್ಯಾಚರಣೆ ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಈಶಾನ್ಯ ರಾಜ್ಯಗಳಾದ ಉತ್ತರಾಖಂಡ, ನಾಗಾಲ್ಯಾಂಡ್, ಅಸ್ಸಾಂ ಮತ್ತು ಮಣಿಪುರದಾದ್ಯಂತ 40 ಪರಿಹಾರ ತಂಡಗಳನ್ನು ನಿಯೋಜಿಸಿದ್ದು, ಸ್ಥಳೀಯ ಆಡಳಿತದ ಸಹಯೋಗದೊಂದಿಗೆ ಆಪರೇಷನ್ ಜಲ ರಹತ್–2 ಅಡಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಈವರೆಗೆ ಒಟ್ಟು 3,820 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಸೇನೆ ಪ್ರಕಟಣೆಯಲ್ಲಿ ತಿಳಿಸಿದೆ.

ಸೇನೆಯು ಸಂತ್ರಸ್ತರಿಗೆ 1,361 ಆಹಾರ ಪೊಟ್ಟಣ, 15,421 ನೀರಿನ ಬಾಟಲಿಗಳನ್ನು ವಿತರಿಸಲಾಗಿದೆ. ಜತೆಗೆ, 2,095 ಜನರಿಗೆ ವೈದ್ಯಕೀಯ ನೆರವು ನೀಡಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಸದ್ಯ ನೀರಿನ ಮಟ್ಟ ಕಡಿಮೆಯಾಗುತ್ತಿದ್ದರೂ, ಭಾರತೀಯ ಸೇನೆಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಲೇ ಇದೆ. ಅಗತ್ಯವಿದ್ದಲ್ಲಿ ನೆರವಿಗೆ ಧಾವಿಸಲು ಸಿದ್ಧವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.