ನವದೆಹಲಿ: ದೇಶದ ಈಶಾನ್ಯ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಅಸ್ಸಾಂ, ಅರುಣಾಚಲ ಮತ್ತು ವಿಜೋರಾಂ ರಾಜ್ಯಗಳಲ್ಲಿ ಮಳೆ ಸಂಬಂಧಿತ ಅವಘಡಗಳಿಗೆ 12ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
ಅಸ್ಸಾಂ ರಾಜ್ಯದ ಕಾಮರೂಪ, ಬೊಂಡಾ ಭಾಗಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ 24 ಗಂಟೆಗಳಲ್ಲಿ ಐವರು ಮೃತಪಟ್ಟಿದ್ದಾರೆ. ಸುಮಾರು 10 ಸಾವಿರ ಜನರಿಗೆ ತೊಂದರೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಿಜೋರಾಂ ರಾಜ್ಯದಲ್ಲಿ ಗುಡ್ಡ ಕುಸಿತದ ಪರಿಣಾಮ 5 ಮನೆಗಳು ನೆಲಸಮವಾಗಿವೆ. ಈ ವೇಳೆ ನಾಲ್ವರು ಮೃತಪಟ್ಟಿದ್ದಾರೆ.
ಅರುಣಾಚಲದ ವಿವಿಧ ಭಾಗಗಳಲ್ಲಿ ಭೂಕುಸಿತ ಸಂಭವಿಸಿದ್ದು ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಆಯಾ ರಾಜ್ಯಗಳ ಸರ್ಕಾರಗಳು ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ. ಮಳೆ ಇನ್ನೂ ಮೂರು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.