ADVERTISEMENT

ವರುಣ್ ಗಾಂಧಿ ಕಾಂಗ್ರೆಸ್ ಸೇರುವ ಬಗ್ಗೆ ತಿಳಿದಿಲ್ಲ: ರಾಹುಲ್ ಸ್ಪಷ್ಟನೆ

ವರುಣ್ ಇದೀಗ ಉತ್ತರಪ್ರದೇಶ ಸುಲ್ತಾನಪುರದ ಬಿಜೆಪಿಯ ಲೋಕಸಭಾ ಸದಸ್ಯ

​ಪ್ರಜಾವಾಣಿ ವಾರ್ತೆ
Published 25 ಜನವರಿ 2019, 11:07 IST
Last Updated 25 ಜನವರಿ 2019, 11:07 IST
   

ಭುವನೇಶ್ವರ: ಬಿಜೆಪಿ ಮುಖಂಡ ವರುಣ್ ಗಾಂಧಿ ಕಾಂಗ್ರೆಸ್ ಸೇರುವ ಬಗ್ಗೆ ಹರಿದಾಡುತ್ತಿರುವ ಊಹಾಪೋಹಾಗಳ ಅರಿವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ವರುಣ್ ಗಾಂಧಿ ಬಿಜೆಪಿ ತೊರೆದು ಕಾಂಗ್ರೆಸ್ ಬಳಗಕ್ಕೆ ಸೇರಿಕೊಳ್ಳಲಿದ್ದಾರೆ ಎಂಬ ವದಂತಿ ಎಲ್ಲೆಡೆ ಹಬ್ಬಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಿಯಾಂಕಾಗಾಂಧಿ ವಾದ್ರಾ ಅವರನ್ನು ಉತ್ತರಪ್ರದೇಶದ ಪೂರ್ವವಿಭಾಗದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ಬುಧವಾರ ನೇಮಿಸಲಾಗಿದೆ. ಈ ಬೆಳವಣಿಗೆಯ ಎರಡು ದಿನಗಳ ನಂತರ ವರುಣ್ ವಿಚಾರ ಕೇಳಿ ಬಂದಿದೆ.

ADVERTISEMENT

ವರುಣ್ ಗಾಂಧಿ ಅವರು ರಾಹುಲ್ ಸಂಬಂಧಿ. ಇದೀಗ ಉತ್ತರಪ್ರದೇಶ ಸುಲ್ತಾನಪುರದಲೋಕಸಭಾ ಕ್ಷೇತ್ರದ ಬಿಜೆಪಿ ಸದಸ್ಯ. ಇವರ ತಾಯಿ ಮನೇಕಾ ಗಾಂಧಿ ಅವರು ನರೇಂದ್ರ ಮೋದಿ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.