ADVERTISEMENT

ಕಾವೇರಿ ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಪ್ರಸ್ತಾಪ ಬೇಡ: ತಮಿಳುನಾಡು

ಪಿಟಿಐ
Published 14 ಫೆಬ್ರುವರಿ 2024, 14:30 IST
Last Updated 14 ಫೆಬ್ರುವರಿ 2024, 14:30 IST
ಮೇಕೆದಾಟು ಯೋಜನೆ
ಮೇಕೆದಾಟು ಯೋಜನೆ   

(ಸಾಂದರ್ಭಿಕ ಚಿತ್ರ)

ಚೆನ್ನೈ: ಸಭೆಯಲ್ಲಿ ಮೇಕೆದಾಟು ಅಣೆಕಟ್ಟೆ ನಿರ್ಮಾಣದ ಬಗ್ಗೆ ಚರ್ಚಿಸುವುದು ಸರಿಯಾದ ಕ್ರಮ ಅಲ್ಲ ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWM) ಸರ್ಕಾರ ತಿಳಿಸಿದೆ ಎಂದು ರಾಜ್ಯದ ಜಲ ಸಂಪನ್ಮೂಲ ಸಚಿವ ದುರೈಮುರುಗನ್‌ ಬುಧವಾರ ತಮಿಳುನಾಡು ವಿಧಾನಸಭೆಗೆ ತಿಳಿಸಿದ್ದಾರೆ.

ಮೇಕೆದಾಟು ಎಂಬಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಜಲಾಶಯ ನಿರ್ಮಿಸುವ ಪ್ರಸ್ತಾವನೆಯನ್ನು ಪ್ರಾಧಿಕಾರದ ಸಭೆಯ ಅಜೆಂಡಾದಲ್ಲಿ ಪದೇ ಪದೇ ಪ್ರಸ್ತಾಪಿಸಿ, ಚರ್ಚೆ ಮಾಡಿದ್ದಕ್ಕೆ ಪ್ರತಿಭಟನೆ ವ್ಯಕ್ತಪಡಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ADVERTISEMENT

ಈ ವಿಷಯವನ್ನು ಸಭೆಯಲ್ಲಿ ಪ್ರಸ್ತಾಪಿಸಬಾರದು ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಅವರೂ ಹೇಳಿದ್ದಾರೆ ಎಂದು ದುರೈಮುರುಗನ್‌ ಹೇಳಿದ್ದಾರೆ.

‘ಅದಾಗ್ಯೂ ಚರ್ಚೆಯ ಅಜೆಂಡಾದಲ್ಲಿ ಮೇಕೆದಾಟು ಜಲಾಶಯವನ್ನು ಸೇರಿಸಲಾಗುತ್ತಿದೆ. ಇದು ಸರಿಯಾದ ಕ್ರಮ ಅಲ್ಲ ಎಂದು ನಾವು ಪ್ರಾಧಿಕಾರಕ್ಕೆ ತಿಳಿಸಿದ್ದೇವೆ’ ಎಂದು ಅವರು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಪಳನಿಸ್ವಾಮಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.