ADVERTISEMENT

ಖ್ಯಾತ ಅರ್ಥಶಾಸ್ತ್ರಜ್ಞೆ ಇಶರ್‌ ಅಹ್ಲುವಾಲಿಯ ನಿಧನ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2020, 15:00 IST
Last Updated 26 ಸೆಪ್ಟೆಂಬರ್ 2020, 15:00 IST
ಇಶರ್‌ ಅಹ್ಲುವಾಲಿಯ
ಇಶರ್‌ ಅಹ್ಲುವಾಲಿಯ   

ನವದೆಹಲಿ: ಭಾರತದ ಖ್ಯಾತ ಅರ್ಥಶಾಸ್ತ್ರಜ್ಞೆ ಇಶರ್‌ ಅಹ್ಲುವಾಲಿಯ ಶನಿವಾರ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.

ಇಶರ್‌ ಅವರು ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷರಾದ ಮಾಂಟೆಕ್‌ ಸಿಂಗ್‌ ಅಹ್ಲುವಾಲಿಯ ಅವರನ್ನು ವಿವಾಹವಾಗಿದ್ದರು.

ಅವರಿಗೆ 2009ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಇಶರ್ ಅವರ ಸಾವಿನ ಸುದ್ದಿ ಕೇಳಿಬುರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ಶ್ರದ್ಧಾಂಜಲಿ ಸಲ್ಲಿಸಿದರು.

ADVERTISEMENT

ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಭಾರತದ ಅತ್ಯಂತ ಖ್ಯಾತ ಅರ್ಥಶಾಸ್ತ್ರಜ್ಞರಲ್ಲಿ ಒಬ್ಬರು ಎಂದು ಸ್ಮರಿಸಿದ್ದಾರೆ. ಇಶರ್, ನಾನು ನಿನ್ನ ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ. ನಿಮ್ಮ ಜೀವನ ಕಥೆ ಉತ್ತಮ ಜಗತ್ತಿನ ಕನಸು ಕಾಣುವ ಎಲ್ಲ ಮಹಿಳೆಯರಿಗೆ ಸ್ಫೂರ್ತಿಯಾಗಿದೆ ಎಂದು ಭಾರತದ ಮಾಜಿ ವಿದೇಶಾಂಗ ಕಾರ್ಯದರ್ಶಿ ನಿರೂಪಮಾ ಮೆನನ್ ರಾವ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.