ADVERTISEMENT

ಸಿಧುಗೆ ಆಯೋಗದ ನೋಟಿಸ್

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2019, 19:17 IST
Last Updated 20 ಏಪ್ರಿಲ್ 2019, 19:17 IST

ನವದೆಹಲಿ: ಮೋದಿ ಅವರನ್ನು ಸೋಲಿಸುವಂತೆ ಮುಸ್ಲಿಮರಿಗೆ ಕರೆ ನೀಡಿದ್ದ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಅವರಿಗೆ ಚುನಾವಣಾ ಆಯೋಗ ಶನಿವಾರ ನೋಟಿಸ್ ನೀಡಿದೆ.

‘ಸಿಧು ಅವರು ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ರಾಜಕೀಯ ಲಾಭಕ್ಕಾಗಿ ಧಾರ್ಮಿಕ ವಿಷಯಗಳನ್ನು ಬಳಸುವಂತಿಲ್ಲ ಎಂಬ ಸುಪ್ರೀಂ ಕೋರ್ಟ್ ನಿರ್ದೇಶನವನ್ನೂ ಸಿಧು ಉಲ್ಲಂಘಿಸಿದ್ದಾರೆ’ ಎಂದು ಆಯೋಗ ಹೇಳಿದೆ.

ನೋಟಿಸ್‌ಗೆ ಉತ್ತರಿಸಲು 24 ಗಂಟೆಗಳ ಗಡುವು ನೀಡಲಾಗಿದೆ.ಚುನಾವಣಾ ರ್‍ಯಾಲಿಯಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಿಧು ವಿರುದ್ಧ ಬಿಹಾರದ ಕಥಿಹಾರ್‌ ಜಿಲ್ಲೆಯಲ್ಲಿ ಇತ್ತೀಚೆಗೆ ಎಫ್‌ಐಆರ್ ದಾಖಲಾಗಿತ್ತು.

ADVERTISEMENT

‘ದೊಡ್ಡ ಸಂಖ್ಯೆಯಲ್ಲಿರುವ ನೀವು ಒಗ್ಗಟ್ಟಾಗಿ ಮತ ಚಲಾಯಿಸಿದರೆ, ಮೋದಿಯನ್ನು ಸೋಲಿಸಬಹುದು’ ಎಂದು ಸಿಧು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.