ADVERTISEMENT

ನ.26ರಂದು ಸಂವಿಧಾನ ದಿನ ಆಚರಣೆ, ರಾಷ್ಟ್ರಪತಿ ಕೋವಿಂದ್‌ ಅಧ್ಯಕ್ಷತೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2021, 9:20 IST
Last Updated 23 ನವೆಂಬರ್ 2021, 9:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇದೇ 26ರಂದು ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ಸಂವಿಧಾನ ದಿನ ಆಚರಿಸಲಾಗುವುದು. ರಾಷ್ಟ್ರಪತಿ ರಾಮ್‌ನಾಥ್‌ ಕೋವಿಂದ್‌ ಅವರು ಅಧ್ಯಕ್ಷತೆ ವಹಿಸುವರು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಮತ್ತಿತರ ಗಣ್ಯರು ಭಾಗವಹಿಸುವರು ಎಂದರು.

ಲೋಕಸಭಾ ಸೆಕ್ರೆಟರಿಯೇಟ್‌ ಮತ್ತು ಸ್ಪೀಕರ್‌ ಅವರು ಕಾರ್ಯಕ್ರಮ ಆಯೋಜಿಸಿದ್ದಾರೆ.ಸಂವಿಧಾನ ದಿನ ಆಚರಣೆಯನ್ನು 2015ರಲ್ಲಿ ಪ್ರಧಾನಿ ಮೋದಿ ಅವರು ಆರಂಭಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.