ADVERTISEMENT

ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಲು ಮೊಬೈಲ್ ಆ್ಯಪ್

​ಪ್ರಜಾವಾಣಿ ವಾರ್ತೆ
Published 26 ಜೂನ್ 2018, 16:18 IST
Last Updated 26 ಜೂನ್ 2018, 16:18 IST
   

ನವದೆಹಲಿ: ಪಾಸ್‌ಪೋರ್ಟ್‌ ಕಚೇರಿಗೆ ಹೋಗದೆಯೇ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವುದಕ್ಕಾಗಿ mPassportSeva ಆ್ಯಪ್‍ಗೆ ಕೇಂದ್ರ ಸರ್ಕಾರ ಮಂಗಳವಾರ ಚಾಲನೆ ನೀಡಿದೆ.

ದೆಹಲಿಯಲ್ಲಿ ನೆಲೆಸಿರುವ ಹುಬ್ಬಳ್ಳಿಯ ವ್ಯಕ್ತಿಯೊಬ್ಬರು ಈ ಆ್ಯಪ್‌ ಮೂಲಕ ಬೆಂಗಳೂರು ಪ್ರಾದೇಶಿಕ ಪಾಸ್‌ಪೋರ್ಟ್‌ ಕಚೇರಿಯ ವ್ಯಾಪ್ತಿಯಲ್ಲಿರುವ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಅಥವಾ ಅಂಚೆ ಕಚೇರಿ ಪಾಸ್‌ಪೋರ್ಟ್‌ ಸೇವಾ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಹುಬ್ಬಳ್ಳಿ ಅಥವಾ ಬೆಂಗಳೂರಿಗೆ ಹೋಗುವ ಅಗತ್ಯ ಇಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.ಪೊಲೀಸ್‌ ಪರಿಶೀಲನೆ ಅಗತ್ಯ ಇದ್ದರೆ ಅದು ಹುಬ್ಬಳ್ಳಿಯಲ್ಲಿ ನಡೆಯುತ್ತದೆ. ಅದಾದ ಬಳಿಕ, ಪಾಸ್‌ಪೋರ್ಟನ್ನು ಅರ್ಜಿದಾರರು ನೀಡಿದ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಲಾಗುತ್ತದೆ.

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರು ಆ್ಯಪ್‌ಗೆ ಚಾಲನೆ ನೀಡಿದರು. ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ಕನಿಷ್ಠ ಒಂದು ಪಾಸ್‌ಪೋರ್ಟ್‌ ಕಚೇರಿ ಸ್ಥಾಪಿಸುವ ಗುರಿ ಇದೆ ಎಂದು ಅವರು ಹೇಳಿದರು.

ಮೊಬೈಲ್ ಆ್ಯಪ್ ನ ವೈಶಿಷ್ಟ್ಯ ಹೀಗಿದೆ

ADVERTISEMENT
ಅರ್ಜಿ ತುಂಬುವುದು ಹೀಗೆ
ಸ್ಟೇಟಸ್ ಟ್ರ್ಯಾಕರ್ ಸೌಲಭ್ಯ
ಯಾವ ರೀತಯ ಪಾಸ್ ಪೋರ್ಟ್ ಎಂದು ನಮೂದಿಸಿ
ಮೆನು


ಪಾಸ್‍ಪೋರ್ಟ್ ಸೇವಾ ದಿನಾಚರಣೆ ಅಂಗವಾಗಿ ಈ ಆ್ಯಪ್ ಬಿಡುಗಡೆ ಮಾಡಲಾಗಿದೆ.ಪ್ರಸ್ತುತ ಆ್ಯಪ್ ಅಂಡ್ರಾಯ್ಡ್ ಮತ್ತು iOS ಫ್ಲಾಟ್‍ಫಾರ್ಮ್ ನಲ್ಲಿ ಲಭ್ಯವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.