ADVERTISEMENT

ರಾಮ ಮಂದಿರ ನಿರ್ಮಾಣಕ್ಕೆ ಮೋದಿ ಆಪ್ತ ನೃಪೇಂದ್ರ ಮಿಶ್ರಾ ನೇತೃತ್ವ

ಪಿಟಿಐ
Published 19 ಫೆಬ್ರುವರಿ 2020, 15:21 IST
Last Updated 19 ಫೆಬ್ರುವರಿ 2020, 15:21 IST
ರಾಮ ಮಂದಿರದ ಪ್ರತಿಕೃತಿ (ಸಂಗ್ರಹ ಚಿತ್ರ)
ರಾಮ ಮಂದಿರದ ಪ್ರತಿಕೃತಿ (ಸಂಗ್ರಹ ಚಿತ್ರ)   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ನೃಪೇಂದ್ರ ಮಿಶ್ರಾರಾಮ ಜನ್ಮಭೂಮಿ ಟ್ರಸ್ಟ್‌ನ ದೇಗುಲ ನಿರ್ಮಾಣ ಸಮಿತಿಯನೇತೃತ್ವವನ್ನು ವಹಿಸಿಕೊಳ್ಳಲಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯದ ಉಸ್ತುವಾರಿ ನೋಡಿಕೊಳ್ಳಲೆಂದು ಸುಪ್ರೀಂ ಕೋರ್ಟ್‌ ಸೂಚನೆಯಂತೆ ಪ್ರಧಾನಿ ನರೇಂದ್ರ ಮೋದಿ ಈಚೆಗೆ ಘೋಷಿಸಿದ್ದರಾಮ ಮಂದಿರ ಟ್ರಸ್ಟ್‌ನ ಸದಸ್ಯರು ಬುಧವಾರ ಸಭೆ ಸೇರಿ ಈ ತೀರ್ಮಾನ ತೆಗೆದುಕೊಂಡರು.

ರಾಮ ಮಂದಿರ ಟ್ರಸ್ಟ್‌ನ ಅಧ್ಯಕ್ಷರಾಗಿಮಹಾಂತ್ ನೃತ್ಯ ಗೋಪಾಲ್ ದಾಸ್, ಪ್ರಧಾನ ಕಾರ್ಯದರ್ಶಿಯಾಗಿ ಚಂಪತ್ ರೈ ಅವರನ್ನು ಇದೇ ಸಂದರ್ಭ ಚುನಾಯಿಸಲಾಯಿತು.

ADVERTISEMENT

ಟ್ರಸ್ಟ್‌ನ ಮುಖ್ಯಸ್ಥರಾದ ಕೆ.ಪರಾಶರನ್ ಅವರ ದೆಹಲಿ ನಿವಾಸದಲ್ಲಿ ಸಭೆ ನಡೆಯಿತು.ರಾಮ ಮಂದಿರ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಫೆ.5ರಂದು 15 ಸದಸ್ಯರ ಟ್ರಸ್ಟ್‌ ಘೋಷಿಸಿ, 9 ಸದಸ್ಯರನ್ನು ಹೆಸರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.