ADVERTISEMENT

Ahmedabad plane crash: ಘಟನಾ ಸ್ಥಳದಲ್ಲಿ ರಾಷ್ಟ್ರೀಯ ಭದ್ರತಾ ಪಡೆ ನಿಯೋಜನೆ

ಪಿಟಿಐ
Published 14 ಜೂನ್ 2025, 6:11 IST
Last Updated 14 ಜೂನ್ 2025, 6:11 IST
   

ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದ ಸ್ಥಳದಲ್ಲಿ ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪರಿಹಾರ ಕಾರ್ಯಾಚರಣೆಗಳಲ್ಲಿ ಇತರ ಸಂಸ್ಥೆಗಳ (ಕೇಂದ್ರ ಮತ್ತು ರಾಜ್ಯ ಸರ್ಕಾರಿ) ಸಿಬ್ಬಂದಿಗೆ ನೆರವಾಗಲು ಎನ್‌ಎಸ್‌ಜಿ ತಂಡವನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಆದರೆ ‌‌‌‌ಅವರಿಗೆ ಯಾವುದೇ ತನಿಖಾ ಅಧಿಕಾರವಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಗುರುವಾರ ಮಧ್ಯಾಹ್ನ 1.39ರ ಸುಮಾರಿಗೆ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನವು ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು, ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತ್ತು. ದುರಂತದಲ್ಲಿ ಕನಿಷ್ಠ 265 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ:

ವಿಮಾನ ದುರಂತದ ತನಿಖೆಗೆ ಕೇಂದ್ರ ಸರ್ಕಾರ ಗೃಹ ಕಾರ್ಯದರ್ಶಿ ನೇತೃತ್ವದ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ದುರ್ಘಟನೆಯ ‘ಮೂಲ ಕಾರಣ’ವನ್ನು ಪತ್ತೆ ಹಚ್ಚುವ ಜತೆಗೆ ಭವಿಷ್ಯದಲ್ಲಿ ಇಂಥ ಘಟನೆಗಳನ್ನು ಎದುರಿಸಲು ಸಮಗ್ರ ಮಾರ್ಗಸೂಚಿಗಳನ್ನು ಸೂಚಿಸಿ ಎಂದು ನಿರ್ದೇಶಿಸಿದೆ.

ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಈಗಾಗಲೇ ತನಿಖೆ ನಡೆಸುತ್ತಿದೆ. ಜತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಇತರರ ತಂಡಗಳು ಶುಕ್ರವಾರ ಅಪಘಾತ ಸ್ಥಳಕ್ಕೆ(ಮೇಘನಿ ನಗರ) ಭೇಟಿ ನೀಡಿವೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.