ADVERTISEMENT

ಮಾಸ್ಕ್ ಧರಿಸದ ಬಗ್ಗೆ ಪ್ರಶ್ನಿಸಿದ ಪೊಲೀಸರಿಗೆ ಥಳಿಸಿದ ಎನ್‌ಎಸ್‌ಜಿ ಕಮಾಂಡೊ

ಪಿಟಿಐ
Published 1 ಜುಲೈ 2021, 8:30 IST
Last Updated 1 ಜುಲೈ 2021, 8:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಔರಂಗಾಬಾದ್; ಮಾಸ್ಕ್ ಧರಿಸದ ಬಗ್ಗೆ ಪ್ರಶ್ನಿಸಿದ ಪೊಲೀಸರಿಗೆ ಮಹಾರಾಷ್ಟ್ರ ಸ್ಪೆಷಲ್ ರೇಂಜರ್ಸ್‌ ಗ್ರೂಪ್‌ನ ಕಮಾಂಡೊ ಒಬ್ಬರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಔರಂಗಾಬಾದ್‌ನಲ್ಲಿ ಗುರುವಾರ ನಡೆದಿದೆ.

ಘಟನೆಯಲ್ಲಿ ಔರಂಗಾಬಾದ್ ಕಂಟೋನ್ಮೆಂಟ್ ಪೊಲೀಸ್ ಠಾಣೆಯ ಒಬ್ಬ ಎಎಸ್‌ಪಿಸೇರಿದಂತೆ ಇಬ್ಬರು ಪೊಲೀಸ್ ಪೇದೆಗಳುಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆ ನಡೆಸಿರುವ ಕಮಾಂಡೊ ಪಲಂಬರಿ ತಾಲ್ಲೂಕಿನವರಾಗಿದ್ದು, ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸಿರಲಿಲ್ಲ. ಇದನ್ನು ಪ್ರಶ್ನಿಸಿದ ಪೊಲೀಸ್ ಸಿಬ್ಬಂದಿಯ ಮೇಲೆ ಕಮಾಂಡೊ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ADVERTISEMENT

ಆರೋಪಿಯ ಮೇಲೆಐಪಿಸಿ ಸೆಕ್ಷನ್ 332, 504, 188 ಮತ್ತು 269 ರ ಅಡಿ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.