ADVERTISEMENT

ನೀಟ್ ಪರೀಕ್ಷೆ ಪ್ರವೇಶ ಪತ್ರ ಇಂದು ಬಿಡುಗಡೆ: ಹೀಗೆ ಡೌನ್‌ಲೋಡ್ ಮಾಡಿ...

ಏಜೆನ್ಸೀಸ್
Published 15 ಏಪ್ರಿಲ್ 2019, 5:21 IST
Last Updated 15 ಏಪ್ರಿಲ್ 2019, 5:21 IST
   

ನವದೆಹಲಿ:ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್‌) ಪ್ರವೇಶ ಪತ್ರವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಇಂದು ಬಿಡುಗಡೆ ಮಾಡಲಿದೆ.

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸುವ ನೀಟ್ ಪರೀಕ್ಷೆಗೆ ಈ ಬಾರಿ ಸುಮಾರು 15 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಮೇ 5ರಂದು ಪರೀಕ್ಷೆ ನಡೆಯಲಿದೆ.

ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವಂತೆ ಎನ್‌ಟಿಎ ಸೂಚಿಸಿದೆ.

ADVERTISEMENT

ಹೀಗೆ ಡೌನ್‌ಲೋಡ್ ಮಾಡಿ:

* ಎನ್‌ಟಿಎಯ ಅಧಿಕೃತ ವೆಬ್‌ಸೈಟ್ntaneet.nic.inಗೆ ಭೇಟಿ ನೀಡಿ

*‘Download NEET Admit Card 2019’ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ

* ಆಗ ಮತ್ತೊಂದು ವೆಬ್‌ಪೇಜ್‌ಗೆ ರಿಡೈರೆಕ್ಟ್ ಆಗಲಿದೆ. ಅಲ್ಲಿ ಲಾಗಿನ್ ಆಗಬೇಕು

* ನೀಟ್ ಪರೀಕ್ಷೆಯ ನೋಂದಣಿ ಸಂಖ್ಯೆ ಬಳಸಿಕೊಂಡು ಲಾಗಿನ್ ಆಗಿ

* ಪ್ರವೇಶ ಪತ್ರ ಡೌನ್‌ಲೋಡ್ ಮಾಡಿ

ಪರೀಕ್ಷೆಗೆ ಹಾಜರಾಗುವ ವೇಳೆ ವಿದ್ಯಾರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಸೂಚಿಸಲಾಗಿದೆ.

ಕಳೆದ ವರ್ಷ 13 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದಾರೆ. ಈವರೆಗೆ ಸಿಬಿಎಸ್‌ಇ ನಡೆಸುತ್ತಿದ್ದ ನೀಟ್ ಪರೀಕ್ಷೆಯನ್ನು ಇದೇ ಮೊದಲ ಬಾರಿರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಆಯೋಜಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.