ADVERTISEMENT

ಅಹಮದಾಬಾದ್ ವಿಮಾನ ದುರಂತ: AAIB ತನಿಖೆ ಬೆಂಬಲಿಸಿದ US ಸಾರಿಗೆ ಸುರಕ್ಷತಾ ಮಂಡಳಿ

ಪಿಟಿಐ
Published 19 ಜುಲೈ 2025, 13:38 IST
Last Updated 19 ಜುಲೈ 2025, 13:38 IST
   

ನವದೆಹಲಿ: ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದ ಬಗ್ಗೆ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ನಡೆಸುತ್ತಿರುವ ತನಿಖೆಯನ್ನು ಬೆಂಬಲಿಸುತ್ತೇವೆ ಎಂದು ಅಮೆರಿಕದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ (NTSB) ಅಧ್ಯಕ್ಷೆ ಜೆನ್ನಿಫರ್ ಹೋಮೆಂಡಿ ಹೇಳಿದ್ದಾರೆ.

ಘಟನೆಯ ಬಗ್ಗೆ ಬರುತ್ತಿರುವ ವರದಿಗಳು ಅಕಾಲಿಕ ಮತ್ತು ಊಹಾಪೋಹಗಳಾಗಿವೆ ಎಂದು ಅವರು ಹೇಳಿದ್ದಾರೆ.

ಜೂನ್ 12 ರಂದು, ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾದ ಬೋಯಿಂಗ್ 787-8 ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ಕಟ್ಟಡಕ್ಕೆ ಅಪ್ಪಳಿಸಿತ್ತು. ಕಟ್ಟಡದಲ್ಲಿದ್ದ 19 ಜನ ಸೇರಿದಂತೆ 260 ಮಂದಿ ಅಪಘಾತದಲ್ಲಿ ಸಾವಿಗೀಡಾಗಿದ್ದರು.

ADVERTISEMENT

‘ಏರ್ ಇಂಡಿಯಾ 171 ಅಪಘಾತದ ಬಗ್ಗೆ ಇತ್ತೀಚಿಗೆ ಮಾಧ್ಯಮಗಳಲ್ಲಿ ಬಂದ ವರದಿಗಳು ಅಕಾಲಿಕ ಮತ್ತು ಊಹಾತ್ಮಕವಾಗಿವೆ. ಭಾರತದ ವಿಮಾನ ಅಪಘಾತ ತನಿಖಾ ಬ್ಯೂರೋ ತನ್ನ ಪ್ರಾಥಮಿಕ ವರದಿಯನ್ನು ಬಿಡುಗಡೆ ಮಾಡಿದೆ. ಇಂತಹ ತನಿಖೆಗಳು ಸಮಯ ತೆಗೆದುಕೊಳ್ಳುತ್ತವೆ’ ಎಂದು ಹೋಮೆಂಡಿ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ತನಿಖೆ ಇನ್ನೂ ನಡೆಯುತ್ತಿರುವುದರಿಂದ ಅಪಘಾತಕ್ಕೆ ಕಾರಣವಾದ ವಿಷಯಗಳ ಕುರಿತು ಬಗ್ಗೆ ಯಾವುದೇ ನಿರ್ದಿಷ್ಟ ತೀರ್ಮಾನಗಳನ್ನು ತೆಗೆದುಕೊಳ್ಳುವುದು ತೀರಾ ಅವಸರದ ನಿರ್ಧಾರ. ಈ ಬಗ್ಗೆ ನಿರೂಪಣೆಗಳನ್ನು ಹರಡುವುದನ್ನು ನಿಲ್ಲಿಸಬೇಕು ಎಂದು AAIB ಮನವಿ ಮಾಡಿದ ಕೆಲವು ದಿನಗಳ ನಂತರ ಹೊಮೆಂಡಿ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.

AAIBಯ ಸಾರ್ವಜನಿಕ ಮನವಿಯನ್ನು NTSB ಸಂಪೂರ್ಣವಾಗಿ ಬೆಂಬಲಿಸುತ್ತದೆ. ಅದು ನಡೆಸುತ್ತಿರುವ ತನಿಖೆಗೆ ಬೆಂಬಲ ನೀಡುತ್ತದೆ ಎಂದು ಹೋಮೆಂಡಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.