
ನವದೆಹಲಿ: ನಕ್ಸಲ್ ಪೀಡಿತ ರಾಜ್ಯ ಮತ್ತು ಜಿಲ್ಲೆಗಳ ಸಂಖ್ಯೆ ಕಳೆದ ಹತ್ತು ವರ್ಷಗಳಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.
ಲೋಕಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಪ್ರತಿಕ್ರಿಯಿಸಿದ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು, ‘ನಕ್ಸಲ್ ಪೀಡಿತ ರಾಜ್ಯಗಳ ಸಂಖ್ಯೆ 10ರಿಂದ 5ಕ್ಕೆ ಇಳಿಕೆಯಾಗಿದೆ. ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆಯು 126ರಿಂದ 11ಕ್ಕೆ ಇಳಿಕೆಯಾಗಿದೆ’ ಎಂದು ತಿಳಿಸಿದ್ದಾರೆ.
2019ರಿಂದ ಈವರೆಗೆ 29 ಪ್ರಮುಖ ನಕ್ಸಲ್ ನಾಯಕರನ್ನು ಹತ್ಯೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ನಕ್ಸಲ್ ಕೇಂದ್ರ ಸಮಿತಿ ಮತ್ತು ಪಾಲಿಟ್ ಬ್ಯೂರೊದ 14 ಸದಸ್ಯರನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ನಕ್ಸಲ್ ಪೀಡಿತವಾಗಿದ್ದ ರಾಜ್ಯಗಳಲ್ಲಿ ಭದ್ರತಾ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ. ಶಾಲೆ, ಐಟಿಐ, ಕೌಶಲ ವಿಕಾಸ ಕೇಂದ್ರ ಮತ್ತು ಎಟಿಎಂಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.