ADVERTISEMENT

ಶೀಘ್ರದಲ್ಲೇ ಕೇರಳದ ಕ್ರೈಸ್ತ ಸನ್ಯಾಸಿನಿಯರ ಬಿಡುಗಡೆ: ರಾಜೀವ್ ಚಂದ್ರಶೇಖರ್

ಪಿಟಿಐ
Published 1 ಆಗಸ್ಟ್ 2025, 10:38 IST
Last Updated 1 ಆಗಸ್ಟ್ 2025, 10:38 IST
<div class="paragraphs"><p>ರಾಜೀವ್ ಚಂದ್ರಶೇಖರ್</p></div>

ರಾಜೀವ್ ಚಂದ್ರಶೇಖರ್

   

ತ್ರಿಶೂರ್ (ಕೇರಳ): ಮಾನವ ಕಳ್ಳಸಾಗಣೆ ಮತ್ತು ಬಲವಂತದ ಮತಾಂತರದ ಆರೋಪದ ಮೇಲೆ ಛತ್ತೀಸಗಢದಲ್ಲಿ ಕೇರಳದ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಬಂಧಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇರಳ ಬಿಜೆಪಿ ಘಟಕದ ಅಧ್ಯಕ್ಷ ರಾಜೀವ್ ಚಂದ್ರಶೇಖರ್, ತಪ್ಪು ತಿಳಿವಳಿಕೆಯಿಂದಾಗಿ ಅವರನ್ನು ಬಂಧಿಸಲಾಗಿದೆ. ಶೀಘ್ರದಲ್ಲೇ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುವುದು ಎಂದು ಶುಕ್ರವಾರ ಹೇಳಿದ್ದಾರೆ.

ಭಾರತದ ಕ್ಯಾಥೋಲಿಕ್ ಬಿಷಪ್‌ಗಳ ಸಮ್ಮೇಳನ (ಸಿಬಿಸಿಐ ) ಅಧ್ಯಕ್ಷರಾದ ತ್ರಿಶೂರ್‌ನ ಆರ್ಚ್‌ಬಿಷಪ್ ಆಂಡ್ರ್ಯೂಸ್ ಥಝತ್ ಅವರನ್ನು ಭೇಟಿಯಾದ ಬಳಿಕ ಚಂದ್ರಶೇಖರ್ ಈ ಹೇಳಿಕೆ ನೀಡಿದ್ದಾರೆ.

ADVERTISEMENT

ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸನ್ಯಾಸಿನಿಯರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಮಾನವ ಕಳ್ಳಸಾಗಣೆ ಮತ್ತು ಬಲವಂತದ ಮತಾಂತರದ ಆರೋಪದ ಮೇಲೆ ಕೇರಳದ ಸನ್ಯಾಸಿನಿಯರಾದ ಪ್ರೀತಿ ಮೇರಿ, ವಂದನಾ ಫ್ರಾನ್ಸಿಸ್‌ ಅವರನ್ನು ಬಂಧಿಸಲಾಗಿದೆ. ಈ ಇಬ್ಬರು ಸನ್ಯಾಸಿನಿಯರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬುಧವಾರ ನಡೆಸಿದ ದುರ್ಗ್‌ ಜಿಲ್ಲಾ ಸೆಷನ್ಸ್‌ ನ್ಯಾಯಾಲಯವು, ‘ಈ ಜಾಮೀನು ಅರ್ಜಿಗಳನ್ನು ಆಲಿಸುವ ಅಧಿಕಾರ ವ್ಯಾಪ್ತಿ ತನಗಿಲ್ಲ, ಅದಕ್ಕಾಗಿ ವಿಶೇಷ ನ್ಯಾಯಾಲಯಕ್ಕೆ ಹೋಗಬಹುದು’ ಎಂದು ಹೇಳಿ ಅರ್ಜಿ ವಿಲೇವಾರಿ ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.