ನವದೆಹಲಿ: ದೇಶದಲ್ಲಿ ನರ್ಸರಿ ಮತ್ತು ಪ್ರಾಥಮಿಕ ಶಾಲೆಗಳ ಕಟ್ಟಡಗಳ ನಿರ್ಮಾಣ ಕಾರ್ಯವು ಸ್ಥಳೀಯ ನಿಯಮಗಳನ್ನು ಪಾಲಿಸಿರಬೇಕು ಎಂದು ಸುಪ್ರೀಂ ಕೋರ್ಟ್ ಬುಧವಾರ ಸ್ಪಷ್ಟಪಡಿಸಿದೆ.
ಸುಪ್ರೀಂ ಕೋರ್ಟ್ 2009ರ ಏಪ್ರಿಲ್ 13ರಂದು ನೀಡಿದ್ದ ತೀರ್ಪಿನಲ್ಲಿದ್ದ ಕೆಲ ನಿರ್ದೇಶನಗಳ ಬಗ್ಗೆ ಸ್ಪಷ್ಟೀಕರಣ ಕೋರಿ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಅರ್ಜಿ ಸಲ್ಲಿಸಿತ್ತು.
ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸೀಹ್ ಅವರ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.