ADVERTISEMENT

ಆಂಧ್ರ ಸಿಎಂ ಜಗನ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌: ವ್ಯಕ್ತಿ ಬಂಧನ

ಐಎಎನ್ಎಸ್
Published 31 ಮಾರ್ಚ್ 2023, 9:19 IST
Last Updated 31 ಮಾರ್ಚ್ 2023, 9:19 IST
ವೈ.ಎಸ್ ಜಗನ್ ಮೋಹನ್ ರೆಡ್ಡಿ
ವೈ.ಎಸ್ ಜಗನ್ ಮೋಹನ್ ರೆಡ್ಡಿ   

ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಹಂಚಿಕೊಂಡಿರುವ ಆರೋಪದಡಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಪಾಂಡೂರಿ ಕೋಟಿರತ್ನಂ ಅಂಜನ್ (34) ಎಂದು ಗುರುತಿಸಲಾಗಿದೆ.

ಆರೋಪಿಯು ಟಿಡಿಪಿ ಪರವಾಗಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದು, ಆಡಳಿತ ಪಕ್ಷ ವೈಎಸ್‌ಆರ್‌ಸಿಪಿ ನಾಯಕರನ್ನು ಗುರಿಯಾಗಿರಿಸಿಕೊಂಡು ಆಕ್ಷೇಪಾರ್ಹ ಪೋಸ್ಟ್ ಮಾಡುತ್ತಿದ್ದಾನೆ ಎಂದು ಸ್ಥಳೀರು ವೈಎಸ್‌ಆರ್‌ಸಿಪಿ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ.

ADVERTISEMENT

2015 ರಲ್ಲಿ ಭಾರತಕ್ಕೆ ಹಿಂದಿರುಗುವ ಮೊದಲು ಆರೋಪಿಯು ಅಮೆರಿಕದಲ್ಲಿ ಎಂ.ಎಸ್ ಮಾಡಿ ಮೂರು ವರ್ಷಗಳ ಕಾಲ ಅಲ್ಲಿನ ಕಂಪನಿಯೊಂದರಲ್ಲಿ ಕೆಲಸ ಮಾಡಿದ್ದನು. ಈ ಪ್ರಕರಣ ವಿಚಾರಣೆ ನಡೆಸಿದ ಪೊಲೀಸರು ಯಾರ ಒತ್ತಾಯದ ಮೇರೆಗೆ ಪೋಸ್ಟ್ ಮಾಡುತ್ತೀದಿಯಾ ಎಂದು ಪೊಲೀಸರು ಅವರನ್ನು ಪ್ರಶ್ನಿಸಿದ್ದಾರೆ. ಆದರೆ ಅಂಜನ್ ತಾನೇ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರು ಆತನ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 153ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತನ ಮೊಬೈಲ್ ಫೋನ್ ಮತ್ತು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಂಡಿದ್ದು, ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

ಆರೋಪಿಗಳ ವಿರುದ್ಧ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಿಗಾ ವಹಿಸುವುದಾಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.