ADVERTISEMENT

ಬಿಲ್ಡರ್ ಮೇಲೆ ಹಲ್ಲೆ ಆರೋಪ: ಒಡಿಶಾದ ಕಾಂಗ್ರೆಸ್ ಅಭ್ಯರ್ಥಿ ಸುಜಿತ್ ಕುಮಾರ್ ಬಂಧನ

ಪಿಟಿಐ
Published 17 ಮೇ 2024, 10:40 IST
Last Updated 17 ಮೇ 2024, 10:40 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬರ್ಹಾಂಪುರ: ಬಿಲ್ಡರ್‌ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಒಡಿಶಾದ ಗಂಜಾಂ ಜಿಲ್ಲೆಯ ದಿಗಪಹಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಕಾ ಸುಜಿತ್ ಕುಮಾರ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೈಷಮ್ಯದ ಹಿನ್ನೆಲೆಯಲ್ಲಿ ಬಿಲ್ಡರ್‌ ಸುಧನ್ಸು ಸಂಗ್ರಾಮ್ ಪಾಧಿ ಅವರ ಮೇಲೆ ಸುಜಿತ್ ಕುಮಾರ್ ಹಲ್ಲೆ ನಡೆಸಿದ್ದಾರೆ. ಬರ್ಹಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೂಡಲೇ ಸುಜಿತ್‌ರನ್ನು ಬಂಧಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಸುಜಿತ್ ಕುಮಾರ್ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಹಲ್ಲೆಗೆ ಹಳೆಯ ವೈಷಮ್ಯವೇ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಸಂಗ್ರಾಮ್ ಪಾಧಿ ಸೇರಿದಂತೆ ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಾರ್ಥಕ್ ಸಾರಂಗಿ ತಿಳಿಸಿದ್ದಾರೆ.

ಸುಜಿತ್ ಜತೆಗೆ ಆತನ ಸಹಾಯಕ ಅಮಿತ್‌ಕುಮಾರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.