ADVERTISEMENT

ಪ್ರಣಾಳಿಕೆಯ ಅನುಷ್ಠಾನಕ್ಕೆ ಬಿಜೆಡಿ ಕ್ರಮ: ಪ್ರಗತಿ ವರದಿ ಸಲ್ಲಸಲು ಸಚಿವರಿಗೆ ಆದೇಶ

ಒಡಿಶಾ

​ಪ್ರಜಾವಾಣಿ ವಾರ್ತೆ
Published 6 ಜೂನ್ 2019, 1:08 IST
Last Updated 6 ಜೂನ್ 2019, 1:08 IST
   

ಭುವನೇಶ್ವರ: ಒಡಿಶಾದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿರುವ ಬಿಜು ಜನತಾದಳ (ಬಿಜೆಡಿ) ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯ ಸಮರ್ಪಕ ಅನುಷ್ಠಾನಕ್ಕೆ ಬದ್ಧತೆ ತೋರಿದೆ.

ಪ್ರಣಾಳಿಕೆಯಲ್ಲಿರುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕಿದ್ದು, ಈ ನಿಟ್ಟಿನಲ್ಲಿ ಎಲ್ಲ ಸಚಿವರು ತಮ್ಮ ಇಲಾಖೆಯ ಪ್ರತಿ ತಿಂಗಳ ಪ್ರಗತಿ ವರದಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಮಂಗಳವಾರ ಆದೇಶಿಸಿದ್ದಾರೆ.

ಎಲ್ಲ ಸಚಿವರು ಪ್ರತಿ ತಿಂಗಳು ವರದಿಯನ್ನು ಸಿಎಂಗೆ ಸಲ್ಲಿಸಬೇಕು ಎಂಬ ಆದೇಶವಿದೆ. ಪಕ್ಷದ ಚುನಾವಣಾ ಪ್ರಣಾಳಿಕೆಯೇ ಮುಂದಿನ ಐದು ವರ್ಷಗಳವರೆಗೆ ಸರ್ಕಾರದ ಕಾರ್ಯಕ್ರಮಗಳಾಗಿರುತ್ತವೆ ಎಂದು ಮೇ 29ರಂದು ನಡೆದ ಮೊದಲ ಸಂಪುಟ ಸಭೆಯಲ್ಲಿ ನಿರ್ಣಯತೆಗೆದುಕೊಳ್ಳಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.