ಭುವನೇಶ್ವರ: ಬಿಜೆಡಿ ಅಧ್ಯಕ್ಷ ಹಾಗೂ ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ವಿಧಾನಸಭಾ ಚುನಾವಣೆಯಲ್ಲಿ, ಕಾಂತಾಬಾಂಜಿ ಮತ್ತು ಹಿಂಜಿಲಿ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬುಧವಾರ ಬಿಡುಗಡೆಗೊಳಿಸಿದ ಬಳಿಕ ಅವರು ಈ ವಿಚಾರವನ್ನು ಪ್ರಕಟಿಸಿದರು.
2019ರ ವಿಧಾನಸಭಾ ಚುನಾವಣೆಯಲ್ಲೂ ನವೀನ್ ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿ, ಎರಡರಲ್ಲೂ ಗೆದ್ದಿದ್ದರು.
5ನೇ ಪಟ್ಟಿಯಲ್ಲಿ ಒಂಬತ್ತು ಮಂದಿ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.