ಅಮಾನತು
ಭುವನೇಶ್ವರ: ಒಡಿಶಾ ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಮಾಜಿ ಶಾಸಕ ಮೊಹಮ್ಮದ್ ಮೊಕೀಮ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಪಕ್ಷದ ನಾಯಕರೊಬ್ಬರು ಸೋಮವಾರ ತಿಳಿಸಿದ್ದಾರೆ.
‘ಪಕ್ಷ ವಿರೋಧಿ ಚಟುವಟಿಕೆಗಾಗಿ ಮೊಕೀಮ್ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡುವ ಪ್ರಸ್ತಾವವನ್ನು ಎಐಸಿಸಿ ಅನುಮೋದಿಸಿದೆ’ ಎಂದು ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ (ಒಪಿಸಿಸಿ) ಅಧ್ಯಕ್ಷ ಭಕ್ತ ಚರಣದಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾರಾಬತಿ– ಕಟಕ್ ಕ್ಷೇತ್ರದ ಮಾಜಿ ಶಾಸಕ ಮೊಕೀಮ್ ಅವರು ಈಚೆಗೆ ಎಐಸಿಸಿ ನಾಯಕತ್ವದ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರಲ್ಲದೆ, ಪಕ್ಷದ ನಾಯಕಿ ಸೋನಿಯಾ ಗಾಂಧಿಗೆ ಪತ್ರವನ್ನು ಬರೆದಿದ್ದರು.
‘ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಕಾರ್ಯಕರ್ತರು ಭೇಟಿ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ. ಸ್ವತಃ ನಾನೇ ಕಳೆದ ಮೂರು ವರ್ಷಗಳಿಂದ ಪ್ರಯತ್ನಿಸುತ್ತಿದ್ದರೂ, ಅವರ ಭೇಟಿಗೆ ಅವಕಾಶ ಸಿಗುತ್ತಿಲ್ಲ’ ಎಂದು ಅವರು ಪತ್ರದಲ್ಲಿ ಟೀಕಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.