ADVERTISEMENT

Odisha Flood |170 ಗ್ರಾಮಗಳು ಜಲಾವೃತ, ಮುಂದಿನ 2 ದಿನ ಭಾರಿ ಮಳೆ: ಐಎಂಡಿ

ಪಿಟಿಐ
Published 26 ಆಗಸ್ಟ್ 2025, 8:16 IST
Last Updated 26 ಆಗಸ್ಟ್ 2025, 8:16 IST
<div class="paragraphs"><p>ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ</p></div>

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ

   

ಭುವನೇಶ್ವರ: ಒಡಿಶಾದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿವೆ. ಇನ್ನೂ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೂಚನೆ ನೀಡಿದೆ.

ಉತ್ತರ ಒಡಿಶಾದ ಬಾಲಸೋರ್, ಭದ್ರಕ್ ಮತ್ತು ಜಾಜ್‌ಪುರ ಜಿಲ್ಲೆಗಳ 170 ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಬಲಿಯಾಪಾಲ್, ಭೋಗ್ರೈ ಮತ್ತು ಜಲೇಶ್ವರ್ ವ್ಯಾಪ್ತಿಯ 130 ಗ್ರಾಮಗಳು ಹಾಗೂ ಜಾಜ್‌ಪುರದ ಸುಮಾರು 45 ಗ್ರಾಮಗಳು ಪ್ರವಾಹಕ್ಕೆ ಒಳಗಾಗಿವೆ. ಭದ್ರಕ್ ಜಿಲ್ಲೆಯ ಧಮ್‌ನಗರ ಮತ್ತು ಭಂಡಾರಿಪೋಖರಿಯಲ್ಲಿ ಪರಿಣಾಮ ಬೀರಿವೆ. ಕಿಯೋಂಝಾರ್ ಮತ್ತು ಸುಂದರ್‌ಗಢ ಜಿಲ್ಲೆಗಳ ಕೆಲವು ಗ್ರಾಮಗಳೂ ಜಲಾವೃತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೈತರಾಣಿ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಜಾಜ್‌ಪುರ ಜಿಲ್ಲೆಗೆ ತೀವ್ರ ಹಾನಿಯಾಗಿದೆ. ಜಾಜ್‌ಪುರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇನೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗಿವೆ ಎಂದು ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಸುರೇಶ್ ಪೂಜಾರಿ ಹೇಳಿದ್ದಾರೆ.

ಇಂದು (ಆಗಸ್ಟ್‌ 26) ಮತ್ತು 27ರಂದು ಗಜಪತಿ, ರಾಯಗಡ, ನಯಾಗಢ ಮತ್ತು ಕಂಧಮಲ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.