ದೆಹಲಿ ಏಮ್ಸ್
ಪಿಟಿಐ ಚಿತ್ರ
ನವದೆಹಲಿ: ಒಡಿಶಾದ ಪುರಿಯಲ್ಲಿ ಮೂವರು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ 15 ವರ್ಷದ ಬಾಲಕಿಯನ್ನು ಭಾನುವಾರ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಕಿಗೆ ಶೇ 75ರಷ್ಟು ಸುಟ್ಟಗಾಯಗಳಾಗಿದ್ದು, ಮೊದಲು ಆಕೆಯನ್ನು ಭುವನೇಶ್ವರದ ಏಮ್ಸ್‌ಗೆ ದಾಖಲಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಭುವನೇಶ್ವರದ ಏಮ್ಸ್‌ನಿಂದ ಬಿಜು ಪಟ್ನಾಯಕ್ ವಿಮಾನ ನಿಲ್ದಾಣದವರೆಗೆ ಗ್ರೀನ್ ಕಾರಿಡಾರ್ ವ್ಯವಸ್ಥೆ ರೂಪಿಸಿ ಬಾಲಕಿಯನ್ನು ಕರೆದೊಯ್ಯಲಾಗಿದೆ. ನಂತರ ವಿಮಾನದ ಮೂಲಕ ದೆಹಲಿಗೆ ಕರೆತರಲಾಗಿದೆ ಎಂದೂ ತಿಳಿಸಿದ್ದಾರೆ.
‘ಭಾನುವಾರ ಸಂಜೆ 4.20ಕ್ಕೆ ಬಾಲಕಿಯನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿದ್ದು, ಆಕೆಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ವೈದ್ಯರು ಆಕೆಯ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ’ ಎಂದು ದೆಹಲಿ ಏಮ್ಸ್‌ನ ವೈದ್ಯರು ತಿಳಿಸಿದ್ದಾರೆ.
ಶನಿವಾರ ಮೋಟಾರ್ ಸೈಕಲ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಬಾಲಕಿಯನ್ನು ಬಲವಂತವಾಗಿ ಭಾರ್ಗವಿ ನದಿ ದಂಡೆಯ ಸಮೀಪಕ್ಕೆ ಎಳೆದೊಯ್ದು ಅಲ್ಲಿ ಆಕೆಯ ಮೇಲೆ ಪೆಟ್ರೋಲಿಯಂ ಉತ್ಪನ್ನ ಸುರಿದು ಬೆಂಕಿ ಹಚ್ಚಿದ್ದ ಘಟನೆ ನೆಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.