ಭುವನೇಶ್ವರ: ಒಡಿಶಾದ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ನ ಮಾಜಿ ಶಾಸಕ ಸುರೇಂದ್ರ ಸಿಂಗ್ ಭೋಯಿ ಅವರು ಪಕ್ಷ ತೊರೆದು, ಆಡಳಿತಾರೂಢ ಬಿಜೆಡಿಗೆ ಶುಕ್ರವಾರ ಸೇರ್ಪಡೆಗೊಂಡರು.
‘ವೈಯಕ್ತಿಕ ಕಾರಣಗಳಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಕಾಂಗ್ರೆಸ್ ಬಲಂಗೀರ್ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಸುರೇಂದ್ರ ಸಿಂಗ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ಇವರು 38 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದರು.
ಇಬ್ಬರು ಬಿಜೆಪಿ ಮುಖಂಡರು ಬಿಜೆಡಿಗೆ?: ಬಿಜೆಪಿಯ ನೀಲಗಿರಿ ಕ್ಷೇತ್ರದ ಶಾಸಕ ಸುಕಾಂತ್ ನಾಯಕ್ ಮತ್ತು ಬಿಜೆಪಿಯ ಕಟಕ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ್ ಚಂದ್ರ ಬೆಹೆರಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇವರಿಬ್ಬರು ಬಿಜೆಡಿಗೆ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.