ADVERTISEMENT

‘ಫೋನಿ’ ನಷ್ಟ ₹ 12 ಸಾವಿರ ಕೋಟಿ

ಕೇಂದ್ರದ ತಂಡಕ್ಕೆ ತಾತ್ಕಾಲಿಕ ವರದಿ ಸಲ್ಲಿಕೆ

ಪಿಟಿಐ
Published 15 ಮೇ 2019, 14:12 IST
Last Updated 15 ಮೇ 2019, 14:12 IST
   

ಭುವನೇಶ್ವರ: ಫೋನಿ ಚಂಡಮಾರುತದಿಂದ ರಾಜ್ಯದಲ್ಲಿ₹12 ಸಾವಿರ ಕೋಟಿ ನಷ್ಟ ಉಂಟಾಗಿದೆ ಎಂದು ಒಡಿಶಾ ಸರ್ಕಾರ ಅಂದಾಜಿಸಿದೆ.

‘ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರದ ತಂಡಕ್ಕೆ ಪ್ರಾಥಮಿಕ ವರದಿ ಸಲ್ಲಿಸಲಾಗಿದೆ. ನಷ್ಟದ ವಾಸ್ತವಿಕ ಪ್ರಮಾಣ ತಿಳಿಯಲುಅಧಿಕಾರಿಗಳು ಮನೆ ಮನೆಗೂ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಸಮೀಕ್ಷೆ ಪೂರ್ಣಗೊಂಡ ಬಳಿಕ ವಿವರವಾದ ವರದಿ ಸಿದ್ಧಪಡಿಸಲಾಗುವುದು’ ಎಂದು ವಿಶೇಷ ಪರಿಹಾರ ಆಯುಕ್ತ (ಎಸ್‌ಆರ್‌ಸಿ) ಬಿ.ಪಿ. ಸೇಠಿ ತಿಳಿಸಿದ್ದಾರೆ.

‘ಈಗ ಸಲ್ಲಿಸಿರುವ ವರದಿ ತಾತ್ಕಾಲಿಕ. ಸಮೀಕ್ಷೆ ಬಳಿಕ ನಷ್ಟದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ’ ಎಂದು ಕೇಂದ್ರದ ತಂಡದ ಜತೆ ಸಭೆ ನಡೆಸಿದ ಬಳಿಕ ಮುಖ್ಯ ಕಾರ್ಯದರ್ಶಿ ಎ.ಪಿ. ಪಢಿ ತಿಳಿಸಿದ್ದಾರೆ.

ADVERTISEMENT

ವಿದ್ಯುತ್ ಕ್ಷೇತ್ರದಲ್ಲಿ ₹1,160 ಕೋಟಿ, ಪಂಚಾಯತ್ ರಾಜ್ ಮತ್ತು ಕುಡಿಯುವ ನೀರು ವಿಭಾಗದಲ್ಲಿ ₹587 ಕೋಟಿ ನಷ್ಟವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನಿಯಮಾವಳಿ ಪರಿಷ್ಕರಣೆಗೆ ಮನವಿ: ರಾಜ್ಯ ಮತ್ತು ಕೇಂದ್ರ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ನಿಯಮಾವಳಿಗಳನ್ನು ಪರಿಷ್ಕರಿಸಲು ಕೇಂದ್ರದ ತಂಡಕ್ಕೆ ಮನವಿ ಸಲ್ಲಿಸಿದ್ದೇವೆಎಂದು ಪಢಿ ಹೇಳಿದ್ದಾರೆ.

ಕಡಿಮೆ ಸಾಮರ್ಥ್ಯದ ವಿದ್ಯುತ್ ಸರಬರಾಜಿನಿಂದ ಉಂಟಾದ ಹಾನಿಗೆ ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ನಿಯಮದ ಅಡಿಯಲ್ಲಿ ಪರಿಹಾರ ದೊರಕುತ್ತದೆ. ಆದರೆ ಹೈಟೆನ್ಷನ್ ವಿದ್ಯುತ್ ಸರಬರಾಜಿನಿಂದ ಆದ ನಷ್ಟಕ್ಕೆ ಪರಿಹಾರ ನೀಡಲು ಅವಕಾಶವಿಲ್ಲ. ಆದ್ದರಿಂದ ಈ ಮನವಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.