ADVERTISEMENT

ಒಡಿಶಾ | ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸಂಸ್ಕೃತ ಶಿಕ್ಷಕನ ವಿರುದ್ಧ ದೂರು

ಪಿಟಿಐ
Published 29 ಆಗಸ್ಟ್ 2025, 9:38 IST
Last Updated 29 ಆಗಸ್ಟ್ 2025, 9:38 IST
   

ಭುವನೇಶ್ವರ: ಒಡಿಶಾದ ಸುಂದರ್‌ಘರ್‌ ಜಿಲ್ಲೆಯಲ್ಲಿನ ಸರ್ಕಾರಿ ಶಾಲೆಯ ಏಳು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲೆಯ ಸಂಸ್ಕೃತ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಶಾಲೆಯ ಸಂಸ್ಕೃತ ಶಿಕ್ಷಕನು ಆ.16 ರಂದು ಶಾಲಾ ಆವರಣದೊಳಗೆ ಏಳು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಎಸಗಿದ್ದರು. ಈ ಕುರಿತು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಶಾಲೆಯ ಪ್ರಾಂಶುಪಾಲರು ಆ.20 ರಂದು ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ.

‘ಘಟನೆಯ ಕುರಿತು ಸೆಕ್ಷನ್‌ 180ರ ಅಡಿಯಲ್ಲಿ ಸಂತ್ರಸ್ತೆಯರ ಹೇಳಿಕೆಗಳನ್ನು ತೆಗೆದುಕೊಳ್ಳಲಾಗಿದ್ದು, ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ’ ಎಂದು ತಿಳಿಸಿದ್ದಾರೆ.

ADVERTISEMENT

ದೂರು ದಾಖಲಾದ ನಂತರ ಆರೋಪಿಯು ತಲೆಮರೆಸಿಕೊಂಡಿದ್ದು, ಬಂಧಿಸಲು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.