ADVERTISEMENT

ಒಡಿಶಾ ರೈಲು ದುರಂತ: ಮೃತರ ಸಂಖ್ಯೆ 238ಕ್ಕೆ ಏರಿಕೆ

ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ ನಡೆಸುವ ಸಾಧ್ಯತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಜೂನ್ 2023, 5:11 IST
Last Updated 3 ಜೂನ್ 2023, 5:11 IST
   

ಭುವನೇಶ್ವರ್: ಒಡಿಶಾದ ಬಾಲಸೋರ್‌ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣ ಬಳಿ ಮೂರು ರೈಲುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 238ಕ್ಕೆ ಏರಿದೆ. 900 ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ.

ಈ ಕುರಿತು ಒಡಿಶಾ ಸರ್ಕಾರದ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೇನಾ ಮಾಹಿತಿ ನೀಡಿ, ‘ತ್ವರಿತವಾಗಿ ಪರಿಹಾರ ಕಾರ್ಯಾಚರಣೆ ನಡೆಯುತ್ತಿದ್ದು ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ’ ಎಂದಿದ್ದಾರೆ.

ಶುಕ್ರವಾರ ಸಂಜೆ 7.20 ರ ಸುಮಾರು ಈ ದುರ್ಘಟನೆ ನಡೆದಿದೆ. ರೈಲು ದುರಂತದ ಬಗ್ಗೆ ಪ್ರಧಾನಿ ಮೋದಿ ಅವರು ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ADVERTISEMENT

ಇನ್ನೂ ಕೆಲ ಮೂಲಗಳ ಪ್ರಕಾರ ಸಾವಿನ ಸಂಖ್ಯೆ 300ರ ಸನಿಹ ಹೋಗಿದ್ದು ಅಧಿಕೃತವಾಗಿ ಘೋಷಣೆ ಆಗಿಲ್ಲ. ಇದು ಒಡಿಶಾದಲ್ಲಿ ಅತಿದೊಡ್ಡ ರೈಲು ದುರಂತ ಎನ್ನಲಾಗಿದೆ.

‘ಒಡಿಶಾದ ಈ ಮಹಾ ರೈಲು ದುರಂತಕ್ಕೆ ರೈಲು ಹಳಿಗಳಲ್ಲಿನ ದೋಷವೇ ಕಾರಣವಿರಬಹುದು. ಆದರೆ, ತನಿಖೆಯ ನಂತರ ದುರಂತಕ್ಕೆ ನಿಖರ ಕಾರಣವೇನೆಂದು ತಿಳಿಯಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ರೈಲ್ವೆ ಸುರಕ್ಷತಾ ಆಯುಕ್ತರು ತನಿಖೆ ಕೈಗೊಳ್ಳಲಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.