ಸಾಂಕೇತಿಕ ಚಿತ್ರ
ಕೊರಾಪುಟ್: ಒಡಿಶಾದ ಕೊರಾಪುಟ್ ಜಿಲ್ಲೆಯಲ್ಲಿ 14 ವರ್ಷದ ಬುಡಕಟ್ಟು ಸಮುದಾಯದ ಬಾಲಕಿಯ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಶನಿವಾರ ರಾತ್ರಿ ಬಾಲಕಿ ತನ್ನ ಸ್ನೇಹಿತರೊಂದಿಗೆ ಜತ್ರಾ (ನಾಟಕ ಪ್ರದರ್ಶನ) ನೋಡಲು ತೆರಳಿದ್ದಾಗ ಈ ಘಟನೆ ನಡೆದಿದೆ.
ವಿಶ್ರಾಂತಿ ಪಡೆಯಲು ಸ್ಥಳದಿಂದ ಹೊರಬರುತ್ತಿದ್ದಾಗ, ನಾಲ್ವರು ಆರೋಪಿಗಳು ಆಕೆಯನ್ನು ಅಪಹರಿಸಿ ಹತ್ತಿರದ ಗುಡ್ಡಕ್ಕೆ ಕರೆದೊಯ್ದು, ಅಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪರಾಧ ಎಸಗಿದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಮನೆಗೆ ಹಿಂದಿರುಗಿದ ಬಳಿಕ ಬಾಲಕಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ.
ಸೋಮವಾರ ಲಕ್ಷ್ಮಿಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ಪೋಷಕರು ಎಫ್‌ಐಆರ್ ದಾಖಲಿಸಿದ್ದು, ನಾಲ್ವರು ಆರೋಪಿಗಳನ್ನು ನೆರೆಯ ರಾಯಗಡ ಜಿಲ್ಲೆಯ ಕಾಶಿಪುರ ಪೊಲೀಸ್ ಠಾಣೆ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.