ಬಿಜಾಪುರ, ಛತ್ತೀಸಗಢ: ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಯ ಇಬ್ಬರು ಮಹಿಳಾ ನಕ್ಸಲರು ಪೊಲೀಸರ ಮುಂದೆ ಶರಣಾಗಿದ್ದಾರೆ.
ಒಡಿಶಾದ ಬೌದ್ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೊಲೀಸರ ಎದುರು ಇಬ್ಬರು ಮಹಿಳಾ ನಕ್ಸಲರು ಶರಣಾಗಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ತಿಳಿಸಿದೆ.
ಇನ್ನೊಂದೆಡೆ ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಗ್ರಾಮಸ್ಥನೊಬ್ಬನನ್ನು ಹತ್ಯೆ ಮಾಡಿದ್ದಾರೆ.
ಬಾಸುಗುಡಾ ಪೊಲೀಸ್ ಠಾಣೆಯ ತಿಮಾಪುರ ಎಂಬ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೃತನನ್ನು ಮಿಚ್ಚಾ ಹದ್ಮಾ ಎಂದು ಗುರುತಿಸಲಾಗಿದೆ.
‘ನಕ್ಸಲರು ಗ್ರಾಮದ ಹೊರವಲಯದಲ್ಲಿ ಗ್ರಾಮಸ್ಥನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸುದ್ದಿ ತಿಳಿದ ತಕ್ಷಣ ಪೊಲೀಸ್ ತಂಡ ಅಲ್ಲಿಗೆ ತೆರಳಿದೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ’ ಎಂದು ಬಿಜಾಪುರ ಜಿಲ್ಲಾ ಪೊಲೀಸ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.