ನಿಷೇಧಾಜ್ಞೆ
ಕಟಕ್/ಭುವನೇಶ್ವರ: ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಇತ್ತೀಚೆಗೆ ನಡೆದ ಗುಂಪು ಘರ್ಷಣೆಯ ಬಳಿಕ ಕಟಕ್‌ನಲ್ಲಿ ಭಾನುವಾರ ಹೊಸದಾಗಿ ಹಿಂಸಾಚಾರ ನಡೆದಿದ್ದು, 25 ಜನರು ಗಾಯಗೊಂಡಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳಲು ಕಟಕ್‌ನ 13 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
‘ಭಾನುವಾರ ರಾತ್ರಿ 10 ಗಂಟೆಯಿಂದ 36 ಗಂಟೆಗಳವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರುತ್ತದೆ’ ಎಂದು ಪೊಲೀಸ್ ಆಯುಕ್ತ ಎಸ್. ದೇವದತ್ತ ಸಿಂಗ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.