ADVERTISEMENT

ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ಸಹಿಸಲಾಗುವುದಿಲ್ಲ: ಹರಿಯಾಣ ಸಿಎಂ

ಪಿಟಿಐ
Published 10 ಡಿಸೆಂಬರ್ 2021, 16:27 IST
Last Updated 10 ಡಿಸೆಂಬರ್ 2021, 16:27 IST
ಮನೋಹರ್ ಲಾಲ್ ಖಟ್ಟರ್
ಮನೋಹರ್ ಲಾಲ್ ಖಟ್ಟರ್   

ಚಂಡೀಗಡ: ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ಸಹಿಸಲಾಗುವುದಿಲ್ಲ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಶುಕ್ರವಾರ ಹೇಳಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ನಮಾಜ್ ನಡೆಸಲು ಸಾರ್ವಜನಿಕ ಸ್ಥಳಗಳನ್ನು ಮೀಸಲಿಡುವ ಜಿಲ್ಲಾಡಳಿತದ ಹಿಂದಿನ ನಿರ್ಧಾರವನ್ನು ಹಿಂಪಡೆಯಲಾಗಿದೆ. ಅಲ್ಲದೆ ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳಲಿದೆ ಎಂದು ಹೇಳಿದ್ದಾರೆ.

ADVERTISEMENT

'ಗುರುಗ್ರಾಮದಲ್ಲಿಸಾರ್ವಜನಿಕಜಾಗದಲ್ಲಿನಮಾಜ್ ಮಾಡುವುದನ್ನು ಸಹಿಸಲಾಗುವುದಿಲ್ಲ. ಆದರೆ ನಾವೆಲ್ಲರೂ ಸೌಹಾರ್ದಯುತವಾಗಿ ಪರಿಹಾರ ಕಂಡುಕೊಳ್ಳಲಿದ್ದೇವೆ. ಪ್ರತಿಯೊಬ್ಬರೂ ಪ್ರಾರ್ಥನೆ ಸಲ್ಲಿಸುವ ಸೌಲಭ್ಯವನ್ನು ಪಡೆಯಬೇಕು. ಆದರೆ ಯಾರೂ ಇತರರ ಹಕ್ಕುಗಳನ್ನು ಉಲ್ಲಂಘಿಸಬಾರದು. ಅದಕ್ಕೆ ಅವಕಾಶ ನೀಡುವುದಿಲ್ಲ' ಎಂದು ಹೇಳಿದರು.

'ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಪೊಲೀಸ್ ಹಾಗೂ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಯಾರಾದರೂ ಒಬ್ಬರ ಸ್ಥಳದಲ್ಲಿ ನಮಾಜ್ ಮಾಡಿದರೆ ಅಭ್ಯಂತರವಿಲ್ಲ. ಈ ಉದ್ದೇಶಕ್ಕಾಗಿಯೇ ಧಾರ್ಮಿಕ ಸ್ಥಳಗಳನ್ನು ನಿರ್ಮಿಸಲಾಗಿದೆ.ಜನರು ಅಲ್ಲಿಗೆ ಹೋಗಿ ಪ್ರಾರ್ಥನೆ ಸಲ್ಲಿಸುತ್ತಾರೆ.ಪ್ರಾರ್ಥನೆಯನ್ನು ಸಾರ್ವಜನಿಕ ಸ್ಥಳಗಳಲ್ಲಿ ನಡೆಸಬಾರದು. ನಾವು ಸಂಘರ್ಷಕ್ಕೆ ಅವಕಾಶ ನೀಡಬಾರದು' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.