ADVERTISEMENT

ಚುನಾವಣಾ ಸಿಬ್ಬಂದಿ ಪಕ್ಷಾತೀತ-ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿ: ಕಾಂಗ್ರೆಸ್

ಪಿಟಿಐ
Published 27 ಫೆಬ್ರುವರಿ 2021, 14:36 IST
Last Updated 27 ಫೆಬ್ರುವರಿ 2021, 14:36 IST
ಕಾಂಗ್ರೆಸ್
ಕಾಂಗ್ರೆಸ್   

ನವದೆಹಲಿ: ಮತದಾನದ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಪಕ್ಷೇತರರಾಗಿರಬೇಕು ಮತ್ತು ಮುಂಬರುವ ಚುನಾವಣೆಯ ಸಮಯದಲ್ಲಿ ಪಶ್ಚಿಮ ಬಂಗಾಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿಯಾವುದೇ ಹಸ್ತಕ್ಷೇಪವಿಲ್ಲದೆ ಸಮಾನ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಶನಿವಾರ ಹೇಳಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿ, ಕೇಂದ್ರದ ಆಡಳಿತಾರೂಢ ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ 'ತರವಲ್ಲದ' ಮತ್ತು 'ಕೆಳಮಟ್ಟದ' ರಾಜಕೀಯವನ್ನು ಮಾಡುತ್ತಿದೆ. ಇದು ದುರದೃಷ್ಟಕರ ಎಂದು ಆರೋಪಿಸಿದ್ದಾರೆ.

ಚುನಾವಣಾ ಆಯೋಗವು ತನ್ನ ಕೆಲಸವನ್ನು ಮಾಡಿದೆ ಮತ್ತು 'ಚುನಾವಣಾ ಕರ್ತವ್ಯದಲ್ಲಿ ನಿಯೋಜಿಸಲಾದ ಅಧಿಕಾರಿಗಳು ಚುನಾವಣೆ ನಡೆಯುವ ರಾಜ್ಯಗಳಲ್ಲಿ ಪಕ್ಷೇತರವಾಗಿ ಕಾರ್ಯನಿರ್ವಹಿಸಿ ಸಮಾನವಾಗಿ ನೋಡುತ್ತಾರೆ ಎಂದು ನಾವು ಭಾವಿಸುತ್ತೇವೆ' ಎಂದು ಹೇಳಿದರು.

ADVERTISEMENT

ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳು ಚುನಾವಣೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಬಗ್ಗೆ ಆತಂಕ ವ್ಯಕ್ತಪಡಿಸಿವೆ. ಮತದಾನದ ವ್ಯಾಪ್ತಿಯ ರಾಜ್ಯಗಳಲ್ಲಿ ನಿಯೋಜಿಸಲಾದ ಅಧಿಕಾರಿಗಳು ಈ ರಾಜ್ಯಗಳಲ್ಲಿ ಒಂದೇ ತೆರನಾದ ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು ಮತ್ತು ಯಾವುದೇ ರೀತಿಯಲ್ಲಿ ಕಂದಕವನ್ನು ಸೃಷ್ಟಿಸುವುದಿಲ್ಲ ಎಂದು ನಾವು ಭಾವಿಸುತ್ತೇವೆ' ಎಂದು ತಿಳಿಸಿದರು.

ನಾಲ್ಕು ರಾಜ್ಯಗಳಾದ ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ಮಾರ್ಚ್ 27 ರಿಂದ ಪ್ರಾರಂಭವಾಗಲಿದ್ದು, ಪಶ್ಚಿಮ ಬಂಗಾಳದಲ್ಲಿ ಎಂಟು ಹಂತದಲ್ಲಿ ಮತ್ತು ಅಸ್ಸಾಂನಲ್ಲಿ ಮೂರು ಹಂತದಲ್ಲಿ ಚುನಾವಣೆ ನಡೆಯಲಿದೆ. ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗ ಮತ ಎಣಿಕೆ ಕಾರ್ಯ ಮೇ 2 ರಂದು ನಡೆಯಲಿದೆ.

ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಾದ್ಯಂತ 824 ವಿಧಾನಸಭಾ ಸ್ಥಾನಗಳಿಗೆ 18.78 ಕೋಟಿ ಮತದಾರರು 2.7 ಲಕ್ಷ ಮತಗಟ್ಟೆಗಳಲ್ಲಿ ಮತ ಚಲಾಯಿಸಲಿದ್ದಾರೆ. ಅಸ್ಸಾಂನಲ್ಲಿ ಮಾರ್ಚ್ 27, ಏಪ್ರಿಲ್ 1 ಮತ್ತು ಏಪ್ರಿಲ್ 6 ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮತದಾನ ಏಪ್ರಿಲ್ 6 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.