ADVERTISEMENT

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಪಿಟಿಐ
Published 3 ಅಕ್ಟೋಬರ್ 2021, 20:15 IST
Last Updated 3 ಅಕ್ಟೋಬರ್ 2021, 20:15 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಭಾನುವಾರ ಹೆಚ್ಚಿಸಿವೆ. ಪೆಟ್ರೋಲ್ ಬೆಲೆ ಲೀಟರ್‌ಗೆ 25 ಪೈಸೆ ಹಾಗೂ ಡೀಸೆಲ್ ಬೆಲೆ 30 ಪೈಸೆ ಹೆಚ್ಚಳವಾಗಿದೆ.

ಇದರಿಂದಾಗಿ ತೈಲ ಬೆಲೆ ದಾಖಲೆಯ ಮಟ್ಟವನ್ನು ತಲುಪಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ₹ 102.39, ಡೀಸೆಲ್ ಬೆಲೆ ₹ 90.77ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆಯು ₹ 105.95ಕ್ಕೆ, ಡೀಸೆಲ್ ಬೆಲೆಯು ₹ 96.34ಕ್ಕೆ ತಲುಪಿದೆ. ಸ್ಥಳೀಯ ತೆರಿಗೆ ಆಧರಿಸಿ ಪೆಟ್ರೋಲ್, ಡೀಸೆಲ್ ಬೆಲೆಯು ರಾಜ್ಯ
ದಿಂದ ರಾಜ್ಯಕ್ಕೆ ವ್ಯತ್ಯಾಸ ಆಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT