ಕಾರು ಅಪಘಾತ
–ಪಿಟಿಐ ಚಿತ್ರ
ನವದೆಹಲಿ: ಹರಿಯಾಣದ ಚಾರ್ಖಿ ದಾದ್ರಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಒಲಿಂಪಿಕ್ ಕಂಚಿನ ಪದಕ ವಿಜೇತೆ ಮನು ಭಾಕರ್ ಅವರ ಚಿಕ್ಕಪ್ಪ ಮತ್ತು ಅಜ್ಜಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನು ಭಾಕರ್ ಅವರ ಚಿಕ್ಕಪ್ಪ ಮತ್ತು ಅಜ್ಜಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಎಎಸ್‌ಐ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.