ಕೋಯಿಕ್ಕೋಡ್: ಮಸ್ಕತ್‌ಗೆ ತೆರಳುತ್ತಿದ್ದ ಒಮನ್‌ನ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣದಿಂದ ಕೋಯಿಕ್ಕೋಡ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸ್ ಬಂದಿಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘169 ಪ್ರಯಾಣಿಕರಿದ್ದ ಡಬ್ಲ್ಯುವೈ 298 ವಿಮಾನವು ಮಂಗಳವಾರ ಬೆಳಿಗ್ಗೆ ಕಾರಿಪುರ ವಿಮಾನ ನಿಲ್ದಾಣದಿಂದ ಮಸ್ಕತ್‌ಗೆ ಹೊರಟಿತ್ತು. ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣದಿಂದ ಕೆಲವೇ ನಿಮಿಷಗಳಲ್ಲಿ ವಾಪಸ್ ಇದೇ ನಿಲ್ದಾಣಕ್ಕೆ ಮರಳಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ’ ಎಂದು ತಿಳಿಸಿದ್ದಾರೆ.
ಭೂಸ್ಪರ್ಶಕ್ಕೂ ಮೊದಲು ಎರಡು ಗಂಟೆ ವಿಮಾನ ನಿಲ್ದಾಣದ ಮೇಲೆ ಸುತ್ತು ಹೊಡೆದಿತ್ತು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.